ಸತತ 6 ಬಾರಿ ಕುಸಿದ ಶಿರಾಡಿ ಘಾಟ್​ | ಕಣ್ಣೆದುರೇ ಕುಸಿಯುತ್ತಿರುವ ಗುಡ್ಡಗಳು | ತೀವ್ರ ಅನಿವಾರ್ಯತೆಯಾದರೆ ಮಾತ್ರ ಹೆದ್ದಾರಿ ಬಂದ್ ​- ಕೃಷ್ಣ ಬೈರೇಗೌಡ

August 2, 2024
2:36 PM

 ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ  ಭೂ – ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್​ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು ದೃಶ್ಯ ಕಂಡು ಬಂದಿದೆ. ಈ ನಡುವೆ ಹೆದ್ದಾರಿ ಬಂದ್‌ ಮಾಡುವ ಪರಿಸ್ಥಿತಿ ಇಲ್ಲ. ಜುಲೈ 31 ರಂದು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಸಿಮೆಂಟ್​ ಮಂಜು ಭೂಕುಸಿತ ಸ್ಥಳವನ್ನು ವೀಕ್ಷಿಸಿದ್ದಾರೆ. ಬಳಿಕ ಸಚಿವರು ತೀವ್ರ ಅನಿವಾರ್ಯವಾದರೇ ಮಾತ್ರ ಹೆದ್ದಾರಿ ಬಂದ್​ ಮಾಡುತ್ತೇವೆ ಎಂದು ಹೇಳಿದ್ದಾರೆ.

Advertisement
Advertisement
Advertisement

ಮಂಗಳವಾರ ಸಂಜೆ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್​​ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹಗಲು – ರಾತ್ರಿ ಕಾರ್ಯಾಚರಣೆ ನಡೆಸಿ ಬುಧವಾರ ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಸಂಜೆಯ ವೇಳೆಗೆ ಅದೇ ಸ್ಥಳದಲ್ಲಿಯೇ ಭೂಕುಸಿತ ಉಂಟಾಗಿ ಎರಡು ಕಂಟೈನರ್ ಹಾಗೂ ಒಂದು ಟ್ಯಾಂಕರ್ ಸ್ಥಳದಲ್ಲಿ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆಯಿಂದ ಶಿರಾಡಿಯಲ್ಲಿ ಪುನಃ ತಾತ್ಕಾಲಿಕವಾಗಿ ಹೆದ್ದಾರಿ ಬಂದ್ ಮಾಡಲಾಗಿತ್ತು. ಇದರಿಂದ ಹಲವು ಭಾರಿ ವಾಹನಗಳು ಹೆದ್ದಾರಿಯಲ್ಲೇ ಸಿಲುಕಿದ್ದವು. ಹೀಗಾಗಿ ಉಪವಿಭಾಗಾಧಿಕಾರಿ ಡಾ. ಶ್ರುತಿ, ತಹಶೀಲ್ದಾರ್​ ಮೇಘನಾ ರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆ ಭೂಕುಸಿತ ಸ್ಥಳದಲ್ಲಿ ಹಲವು ಗಂಟೆಗಳ ಮೊಕ್ಕಾಂ ಹೂಡಿ ಮಣ್ಣು ತೆರವು ಮಾಡುವ ಕಾರ್ಯಾಕ್ಕೆ ವೇಗ ನೀಡಿದ್ದರು.

Advertisement

ಗುರುವಾರ ಮುಂಜಾನೆ ಜಿಲ್ಲಾಧಿಕಾರಿ ಸತ್ಯಭಾಮ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮಣ್ಣು ತೆರವುಗೊಳಿಸಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಿಲುಕಿದ್ದ ವಾಹನಗಳನ್ನು ಕಳುಹಿಸುವುದಕ್ಕೆ ಆದ್ಯತೆ ನೀಡಲಾಯಿತು. ಆದರೆ, 11:45ರ ವೇಳೆಯಲ್ಲಿ ಪುನಃ ಭೂ-ಕುಸಿತ ಉಂಟಾಗಿದ್ದು ಕಾರ್ಯಾಚರಣೆಗೆ ಅಡ್ಡಿಯಾಯಿತು. ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಮತ್ತೆ ಮಳೆಯಾರ್ಭಟದಿಂದ ವಾಹನಗಳನ್ನು ಏಕಮುಖವಾಗಿ ಸಂಚಾರಕ್ಕೆ ಬಿಡಲಾಯಿತು.

ಮಂಗಳೂರು – ಬೆಂಗಳೂರು ನಡುವೆ ಇರುವ ಅತೀ ಕಡಿಮೆ ಅಂತರದ ರಸ್ತೆ ಮಾರ್ಗವಾದ ಶಿರಾಡಿ ಘಾಟ್ ಈಗಾಗಲೇ 6ನೇ ಬಾರಿಗೆ ಕುಸಿದಿದ್ದು, ಎತ್ತಿನಹೊಳೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಈ ದುರ್ಘಟನೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror