ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂ – ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು ದೃಶ್ಯ ಕಂಡು ಬಂದಿದೆ. ಈ ನಡುವೆ ಹೆದ್ದಾರಿ ಬಂದ್ ಮಾಡುವ ಪರಿಸ್ಥಿತಿ ಇಲ್ಲ. ಜುಲೈ 31 ರಂದು, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕ ಸಿಮೆಂಟ್ ಮಂಜು ಭೂಕುಸಿತ ಸ್ಥಳವನ್ನು ವೀಕ್ಷಿಸಿದ್ದಾರೆ. ಬಳಿಕ ಸಚಿವರು ತೀವ್ರ ಅನಿವಾರ್ಯವಾದರೇ ಮಾತ್ರ ಹೆದ್ದಾರಿ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮಂಗಳವಾರ ಸಂಜೆ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಹಗಲು – ರಾತ್ರಿ ಕಾರ್ಯಾಚರಣೆ ನಡೆಸಿ ಬುಧವಾರ ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಸಂಜೆಯ ವೇಳೆಗೆ ಅದೇ ಸ್ಥಳದಲ್ಲಿಯೇ ಭೂಕುಸಿತ ಉಂಟಾಗಿ ಎರಡು ಕಂಟೈನರ್ ಹಾಗೂ ಒಂದು ಟ್ಯಾಂಕರ್ ಸ್ಥಳದಲ್ಲಿ ಸಿಲುಕಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆಯಿಂದ ಶಿರಾಡಿಯಲ್ಲಿ ಪುನಃ ತಾತ್ಕಾಲಿಕವಾಗಿ ಹೆದ್ದಾರಿ ಬಂದ್ ಮಾಡಲಾಗಿತ್ತು. ಇದರಿಂದ ಹಲವು ಭಾರಿ ವಾಹನಗಳು ಹೆದ್ದಾರಿಯಲ್ಲೇ ಸಿಲುಕಿದ್ದವು. ಹೀಗಾಗಿ ಉಪವಿಭಾಗಾಧಿಕಾರಿ ಡಾ. ಶ್ರುತಿ, ತಹಶೀಲ್ದಾರ್ ಮೇಘನಾ ರಾತ್ರಿ ಸುರಿಯುತ್ತಿದ್ದ ಮಳೆಯ ನಡುವೆ ಭೂಕುಸಿತ ಸ್ಥಳದಲ್ಲಿ ಹಲವು ಗಂಟೆಗಳ ಮೊಕ್ಕಾಂ ಹೂಡಿ ಮಣ್ಣು ತೆರವು ಮಾಡುವ ಕಾರ್ಯಾಕ್ಕೆ ವೇಗ ನೀಡಿದ್ದರು.
ಗುರುವಾರ ಮುಂಜಾನೆ ಜಿಲ್ಲಾಧಿಕಾರಿ ಸತ್ಯಭಾಮ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮಣ್ಣು ತೆರವುಗೊಳಿಸಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಿಲುಕಿದ್ದ ವಾಹನಗಳನ್ನು ಕಳುಹಿಸುವುದಕ್ಕೆ ಆದ್ಯತೆ ನೀಡಲಾಯಿತು. ಆದರೆ, 11:45ರ ವೇಳೆಯಲ್ಲಿ ಪುನಃ ಭೂ-ಕುಸಿತ ಉಂಟಾಗಿದ್ದು ಕಾರ್ಯಾಚರಣೆಗೆ ಅಡ್ಡಿಯಾಯಿತು. ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಮತ್ತೆ ಮಳೆಯಾರ್ಭಟದಿಂದ ವಾಹನಗಳನ್ನು ಏಕಮುಖವಾಗಿ ಸಂಚಾರಕ್ಕೆ ಬಿಡಲಾಯಿತು.
ಮಂಗಳೂರು – ಬೆಂಗಳೂರು ನಡುವೆ ಇರುವ ಅತೀ ಕಡಿಮೆ ಅಂತರದ ರಸ್ತೆ ಮಾರ್ಗವಾದ ಶಿರಾಡಿ ಘಾಟ್ ಈಗಾಗಲೇ 6ನೇ ಬಾರಿಗೆ ಕುಸಿದಿದ್ದು, ಎತ್ತಿನಹೊಳೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆಯ ಅವೈಜ್ಞಾನಿಕ ಕಾಮಗಾರಿಯೇ ಈ ದುರ್ಘಟನೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…