Advertisement
MIRROR FOCUS

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

Share

ಶಿರಾಡಿ ಘಾಟ್‌ ರೈಲು ಮಾರ್ಗದ ಎಡಕುಮರಿ – ಶಿರಿಬಾಗಿಲು ರೈಲು ನಿಲ್ದಾಣಗಳ ಮಧ್ಯೆ ಶನಿವಾರ ರಾತ್ರಿ  ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮವಾಗಿ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಸದ್ಯ ರೈಲು ಓಡಾಟ ಸಾಧ್ಯವಾಗುತ್ತಿಲ್ಲ, ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ರೈಲ್ವೆ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಪರಿಹಾರ ಸಾಮಗ್ರಿಗಳೊಂದಿಗೆ ವಿಶೇಷ ರೈಲು ಘಟನಾ ಸ್ಥಳಕ್ಕೆ ತಲುಪಿದೆ. ರೈಲ್ವೆ ಸಿಬ್ಬಂದಿ ಮತ್ತು ತಾಂತ್ರಿಕ ತಂಡಗಳು ಭೂಕುಸಿತ ತೆರವುಗೊಳಿಸುವ ಕಾರ್ಯವನ್ನು  ನಡೆಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾಸನ, ಸುಬ್ರಹ್ಮಣ್ಯ ರಸ್ತೆ, ಶಿರಿಬಾಗಿಲು, ಕಬಕ ಪುತ್ತೂರು ಹಾಗೂ ಬಂಟ್ವಾಳ ರೈಲು ನಿಲ್ದಾಣಗಳಲ್ಲಿ ಆಹಾರ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಶಿರಾಡಿ ಘಾಟಿಯಲ್ಲಿ ಸಂಭವಿಸಿರುವ ಭೂಕುಸಿತದ ಹಿನ್ನೆಲೆಯಲ್ಲಿ, ನಿನ್ನೆ ಸಂಚರಿಸಬೇಕಿದ್ದ ಎಲ್ಲಾ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ನಿಲ್ದಾಣಗಳಲ್ಲೇ ಸ್ಥಗಿತಗೊಳಿಸಲಾಗಿದ್ದು, ಒಂದು ರೈಲನ್ನು ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ ಮಾಡಲಾಗಿತ್ತು.  ಇಂದಿನ ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

A landslide occurred around 8:45 PM between Yedakumari and Shiribagilu stations on the Shiradi Ghat railway section, disrupting train services. Railway authorities have deployed a Relief Material Train, and restoration work is underway. Catering facilities have been arranged for stranded passengers at Hassan, Subrahmanya Road, Shiribagilu, Kabaka Puttur, and Bantawala stations. Passenger safety remains the top priority.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

4 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

9 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

9 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

10 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

10 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

20 hours ago