ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

December 27, 2024
7:23 AM
ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror