ಶಿರಾಡಿಯಲ್ಲಿ ನಿರ್ಮಾಣವಾಗಲಿದೆ ಸುರಂಗ ಮಾರ್ಗ | ಪರಿಸರವಾದಿಗಳ ಆತಂಕ |

March 12, 2021
10:46 PM

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆ ಪರಿಸರದ ಮೇಲೆ ಹಾನಿಯಾಗಲಿದೆ ಎಂದು ವಾದಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75 ರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುರಂಗದ ಉದ್ದ 23.6 ಕಿ.ಮೀ. ಇದ್ದು,  ಯೋಜನೆಯ ಟೆಂಡರ್ ಇತ್ಯಾದಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸುರಂಗ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಭಾರತೀಯ ವಿಜ್ಞಾನ ಸಂಸ್ಥೆ ನೀಡಿದೆ. ಅದರಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.

ಪ್ರತೀ ವರ್ಷವೂ ಈ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಬೆಂಗಳೂರು ಮತ್ತು ಮಂಗಳೂರು ನಡುವಿನ ಜೀವನಾಡಿಯಾಗಿರುವ ಶಿರಾಡಿ ಘಾಟ್ ಮೂಲಕ ಸಾವಿರಾರು ಸರಕುಗಳು ಮತ್ತು ಪ್ರಯಾಣಿಕ ವಾಹನಗಳು ಓಡಾಡುತ್ತವೆ. ಮಳೆಗಾಲ ಈ ರಸ್ತೆ ಸಮಸ್ಯೆಯಾಗುವುದರಿಂದ ಕೇಂದ್ರ ಸರಕಾರವು ಸುರಂಗ ಮಾರ್ಗ ರಚನೆಗೆ ಯೋಜನೆ ರೂಪಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೆಲವೇ ವರ್ಷಗಳಲ್ಲಿ ಯೋಜನೆಯನ್ನು ಜಾರಿಯಾಗಬಹುದು.

ಈ ನಡುವೆ ಹಲವು ವಿರೋಧಗಳು ವ್ಯಕ್ತವಾಗಿದೆ. ಶಿರಾಡಿ ಘಾಟ್‌ನಲ್ಲಿ  ಸುರಂಗ ನಿರ್ಮಾಣಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಪಶ್ಚಿಮ ಘಟ್ಟದ ​​ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಭೂಕುಸಿತಕ್ಕೆ ಕಾರಣವಾಗುತ್ತದೆ ಎಂದು ಪರಿಸರವಾದಿಗಳು ಹೇಳುತ್ತಾರೆ. ಹೀಗಾಗಿ ಇಂತಹ ಯೋಜನೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror