ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. 23.6 ಕಿಮೀ ಉದ್ದದ ಸುರಂಗ ಮಾರ್ಗವು ನಿರ್ಮಾಣವಾಗಲಿದ್ದು ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಯೋಜನೆ ಪರಿಸರದ ಮೇಲೆ ಹಾನಿಯಾಗಲಿದೆ ಎಂದು ವಾದಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75 ರಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುರಂಗದ ಉದ್ದ 23.6 ಕಿ.ಮೀ. ಇದ್ದು, ಯೋಜನೆಯ ಟೆಂಡರ್ ಇತ್ಯಾದಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಸುರಂಗ ನಿರ್ಮಾಣಕ್ಕಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಭಾರತೀಯ ವಿಜ್ಞಾನ ಸಂಸ್ಥೆ ನೀಡಿದೆ. ಅದರಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡಿದೆ.
ಪ್ರತೀ ವರ್ಷವೂ ಈ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿತ್ತು. ಬೆಂಗಳೂರು ಮತ್ತು ಮಂಗಳೂರು ನಡುವಿನ ಜೀವನಾಡಿಯಾಗಿರುವ ಶಿರಾಡಿ ಘಾಟ್ ಮೂಲಕ ಸಾವಿರಾರು ಸರಕುಗಳು ಮತ್ತು ಪ್ರಯಾಣಿಕ ವಾಹನಗಳು ಓಡಾಡುತ್ತವೆ. ಮಳೆಗಾಲ ಈ ರಸ್ತೆ ಸಮಸ್ಯೆಯಾಗುವುದರಿಂದ ಕೇಂದ್ರ ಸರಕಾರವು ಸುರಂಗ ಮಾರ್ಗ ರಚನೆಗೆ ಯೋಜನೆ ರೂಪಿಸಿತ್ತು. ಇದೀಗ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೆಲವೇ ವರ್ಷಗಳಲ್ಲಿ ಯೋಜನೆಯನ್ನು ಜಾರಿಯಾಗಬಹುದು.
ಈ ನಡುವೆ ಹಲವು ವಿರೋಧಗಳು ವ್ಯಕ್ತವಾಗಿದೆ. ಶಿರಾಡಿ ಘಾಟ್‌ನಲ್ಲಿ ಸುರಂಗ ನಿರ್ಮಾಣಕ್ಕೆ ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯು ಪಶ್ಚಿಮ ಘಟ್ಟದ ಪರಿಸರವನ್ನು ಹಾನಿಗೊಳಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಭೂಕುಸಿತಕ್ಕೆ ಕಾರಣವಾಗುತ್ತದೆ ಎಂದು ಪರಿಸರವಾದಿಗಳು ಹೇಳುತ್ತಾರೆ. ಹೀಗಾಗಿ ಇಂತಹ ಯೋಜನೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…