ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

July 18, 2024
8:06 PM
ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ.

ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಂಪಾಜೆಯ ಕರ್ತೋಜಿ ಎಂಬಲ್ಲಿಯೂ ಕುಸಿತದ ಭೀತಿ ಇದೆ. ಎರಡು ದಿನಗಳಿಂದಲೇ ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ಕುಸಿತ ಉಂಟಾಗಿತ್ತು. ಇದೀಗ ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಹಗಲು ಮಾತ್ರಾ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ಎರಡು ದಿನಗಳ ಕಾಲ ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ರಾತ್ರಿ ವೇಳೆ ಮಾತ್ರಾ ಸ್ಥಗಿತಗೊಳಿಸಲಾಗಿದೆ. ಮುಂದಿನ 4 ದಿನಗಳ ಕಾಲ  ಅಂದರೆ ಜು.18 ರಿಂದ 22 ರವೆರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಸಂಪಾಜೆ-ಮಡಿಕೇರಿ ವಾಹನ ಸಂಚಾರದ ಆದೇಶ

ಇದೇ ವೇಳೆ ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ. ರಾತ್ರಿ ವೇಳೆ ಟ್ಯಾಂಕರ್‌ ಓಡಾಟ  ಸ್ಥಗಿತಗೊಂಡಿದೆ.ಶಿರಾಡಿ ಹಾಗೂ ಆಸುಪಾಸಿನಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಶಿರಾಡಿ ಘಾಟಿಯ  ಪ್ರದೇಶದಲ್ಲಿ ಬೆಳಗ್ಗೆ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಶಿರಾಡಿ ಘಾಟಿ ಮೂಲಕ ವಾಹನ ಸಂಚಾರ ಆರಂಭಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮತ್ತೆ ಕುಸಿದ ಭೀತಿ ಇದೆ. ( ಶಿರಾಡಿಯಲ್ಲಿ ವಾಹನ ಓಡಾಟದ ವಿಡಿಯೋ ಇಲ್ಲಿದೆ…).ಹೀಗಾಗಿ, ಘಾಟಿ ರಸ್ತೆಯಲ್ಲಿ ತುರ್ತು ಕಾಮಗಾರಿಗಳು ನಡೆಯಬೇಕಿರುವುದರಿಂದ ಶುಕ್ರವಾರದಿಂದ ಕಾಮಗಾರಿ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸ್ಥಗಿತಗೊಳಸಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರು ಹಾಸನ-ಬೇಲೂರು-ಮೂಡಿಗೆರೆ-ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಿದ್ದಾರೆ.

ಶಿರಾಡಿ ರಸ್ತೆ ಸಂಚಾರ ಬಂದ್‌ – ಆದೇಶ

From tonight, vehicular traffic on the Sampaje-Madikeri road is prohibited between 8 pm and 6 am. However, vehicular movement is still allowed at Shiradi Ghati.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror