ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಂಪಾಜೆಯ ಕರ್ತೋಜಿ ಎಂಬಲ್ಲಿಯೂ ಕುಸಿತದ ಭೀತಿ ಇದೆ. ಎರಡು ದಿನಗಳಿಂದಲೇ ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ಕುಸಿತ ಉಂಟಾಗಿತ್ತು. ಇದೀಗ ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಹಗಲು ಮಾತ್ರಾ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ಮಡಿಕೇರಿ ಸಂಪಾಜೆ ರಸ್ತೆಯ ನಡುವೆ ರಾತ್ರಿ ವೇಳೆ ಮಾತ್ರಾ ಸ್ಥಗಿತಗೊಳಿಸಲಾಗಿದೆ. ಮುಂದಿನ 4 ದಿನಗಳ ಕಾಲ ಅಂದರೆ ಜು.18 ರಿಂದ 22 ರವೆರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ ಸಂಚಾರ ಓಡಾಟ ನಡೆಯುತ್ತಿದೆ. ರಾತ್ರಿ ವೇಳೆ ಟ್ಯಾಂಕರ್ ಓಡಾಟ ಸ್ಥಗಿತಗೊಂಡಿದೆ.ಶಿರಾಡಿ ಹಾಗೂ ಆಸುಪಾಸಿನಲ್ಲಿ ಇದುವರೆಗೆ ಯಾವುದೇ ಸಮಸ್ಯೆಯಾಗಿಲ್ಲ. ಶಿರಾಡಿ ಘಾಟಿಯ ಪ್ರದೇಶದಲ್ಲಿ ಬೆಳಗ್ಗೆ ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಹೀಗಾಗಿ ಶಿರಾಡಿ ಘಾಟಿ ಮೂಲಕ ವಾಹನ ಸಂಚಾರ ಆರಂಭಗೊಂಡಿತ್ತು. ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮತ್ತೆ ಕುಸಿದ ಭೀತಿ ಇದೆ. ( ಶಿರಾಡಿಯಲ್ಲಿ ವಾಹನ ಓಡಾಟದ ವಿಡಿಯೋ ಇಲ್ಲಿದೆ…).ಹೀಗಾಗಿ, ಘಾಟಿ ರಸ್ತೆಯಲ್ಲಿ ತುರ್ತು ಕಾಮಗಾರಿಗಳು ನಡೆಯಬೇಕಿರುವುದರಿಂದ ಶುಕ್ರವಾರದಿಂದ ಕಾಮಗಾರಿ ಮುಗಿಯುವವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸ್ಥಗಿತಗೊಳಸಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಓಡಾಡುವ ಪ್ರಯಾಣಿಕರು ಹಾಸನ-ಬೇಲೂರು-ಮೂಡಿಗೆರೆ-ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಿದ್ದಾರೆ.
From tonight, vehicular traffic on the Sampaje-Madikeri road is prohibited between 8 pm and 6 am. However, vehicular movement is still allowed at Shiradi Ghati.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…