#RishabhShetty| ಸದ್ದಿಲ್ಲದೆ ವಿದೇಶದಾದ್ಯಂತ ಪ್ರದರ್ಶನ ಕಂಡ `ಶಿವಮ್ಮ` | ಪ್ರಶಸ್ತಿಗಳ ಸರಮಾಲೆಯನ್ನೇ ಹೊತ್ತು ತಂದ ಚಿತ್ರ |

July 14, 2023
12:38 PM
ರಿಷಬ್ ಶೆಟ್ಟಿ ಸಂಸ್ಥೆಯ ‘ಶಿವಮ್ಮʼ ಚಿತ್ರ ಪ್ರಪಂಚಾದ್ಯಂತ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಮುಂದುವರೆಸಿದೆ.

ಕರಾವಳಿ ಪ್ರತಿಭೆ ರಿಷಭ್ ಶೆಟ್ಟಿ ಒಂದಲ್ಲ ಒಂದು ಪ್ರಯೋಗಳನ್ನು ಮಾಡುತ್ತಲೇ ಇರುತ್ತಾರೆ. ತಾವು ಸಿನಿಮಾ ಮಾಡೋದು, ನಟಿಸೋದು ಬಿಟ್ಟು ಅದರಾಚೆಗೆ ತಮ್ಮ ಬ್ಯಾನರ್ ಅಡಿಯಲ್ಲಿ ಅನೇಕ ಹೊಸ ಪ್ರತಿಭೆಗಳಿಗೆ, ನವ ಯುವಕರಿಗೆ ಅವಕಾಶಗಳನ್ನು ನೀಡುತ್ತಿರುತ್ತಾರೆ. ಇದೀಗ ಇವರ ಬ್ಯಾನರ್ ಅಡಿಯಲ್ಲಿ ಬಂದ ಹೊಸೊಬ್ಬರ ಚಿತ್ರವೊಂದು ಭಾರಿ ಪ್ರಶಸ್ತಿಗಳ ಸುರಿಮಳೆಯನ್ನೇ ಪಡೆದುಕೊಂಡಿದೆ.

Advertisement

ದೊಡ್ಡ ಬಜೆಟ್ಟಿನ ಚಿತ್ರಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ಅದರಲ್ಲಿ ನಮ್ಮ ರಿಷಬ್ ಶೆಟ್ಟಿ  ಸಂಸ್ಥೆಯ ‘ಶಿವಮ್ಮ’ಚಿತ್ರ ಪ್ರಪಂಚಾದ್ಯಂತ ತನ್ನ ತೆಕ್ಕೆಗೆ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಅನ್ನು ಮುಂದುವರಿಸಿದೆ.

ಇದು ಜೈ ಶಂಕರ್ ಆರ್ಯರ್, ನಿರ್ದೇಶನದ ಚೊಚ್ಚಲ ಚಿತ್ರ. ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ಈ ಸಿನಿಮಾ  ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಕೊಡುಗೆ.

ಈವರೆಗೂ ಶಿವಮ್ಮ  ಗೆದ್ದ  ಪ್ರಶಸ್ತಿಗಳ ಪಟ್ಟಿ ದೊಡ್ಡದಿದೆ. ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್  ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್  ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ  ಅಂತರ್ರಾಷ್ಟ್ರೀಯ ಚಿತ್ರೋತ್ಸವ  ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಈ ಸಿನಿಮಾದ ಬಗ್ಗೆ ರಿಷಬ್ ಶೆಟ್ಟಿ ಹೆಮ್ಮೆಯಿಂದಲೇ ಮಾತನಾಡಿದ್ದಾರೆ. ಇಂತಹದ್ದೊಂದು ಸಿನಿಮಾ ತಮ್ಮದೇ ಬ್ಯಾನರ್ ನಲ್ಲಿ ಬಂದಿದ್ದು, ಸಹಜವಾಗಿಯೇ ಅವರಿಗೆ ಸಂಭ್ರಮ ತಂದಿದೆ. ಈ ಸಿನಿಮಾ ಇನ್ನೂ ಹಲವು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಲಿ ಎಂದು ನಿರ್ದೇಶಕರಿಗೆ ರಿಷಬ್ ಹಾರೈಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |
May 9, 2025
7:46 AM
by: ದ ರೂರಲ್ ಮಿರರ್.ಕಾಂ
ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?
May 9, 2025
7:39 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ
May 8, 2025
8:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group