Advertisement
ಸುದ್ದಿಗಳು

ಶಿವಮೊಗ್ಗದಲ್ಲಿ ಸಿರಿಧಾನ್ಯ ಮೇಳ | ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಉತ್ತಮ ಸ್ಪಂದನೆ

Share

ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್‌, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘದ ಸಹಯೋಗದಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಉದ್ಯಾವನದಲ್ಲಿ ನಡೆಯುತ್ತಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಮೇಳಕ್ಕೆ ಸಾವಿರಾರು ಸಾರ್ವಜನಿಕರು ಆಗಮಿಸಿ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Advertisement

ನಾಲ್ಕು ದಿನಗಳ ಕಾಲ ಆಯೋಜಿಸಿರುವ ಈ ಮೇಳದಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಮೇಳದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ತಯಾರಿಕೆಯ ವಸ್ತುಗಳನ್ನು ಪ್ರದರ್ಶಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದು ವಿಶೇಷ ಗಮನ ಸೆಳೆಯುತ್ತಿದೆ.

ಸಚಿವ ಮಧು ಬಂಗಾರಪ್ಪ, ಯಡಿಯೂರಪ್ಪ ಭೇಟಿ:  ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಅವರು ಉದ್ಯಾನವನಕ್ಕೆ ಭೇಟಿ ನೀಡಿ ಫಲಪುಷ್ಪ ಪ್ರದರ್ಶನ ಮತ್ತು ಮೇಳವನ್ನು ವೀಕ್ಷಿಸಿದರು. ಮೇಳದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಸ್ವಸಹಾಯ ಸಂಘಗಳ ಮಹಿಳೆಯರ ಉತ್ಪನ್ನಗಳ ಗುಣಮಟ್ಟ ಹಾಗೂ ಗ್ರಾಮೀಣ ಉದ್ಯಮಶೀಲತೆಯನ್ನು ಪ್ರಶಂಸಿಸಿದರು.

ರಾಷ್ಟ್ರೀಯ ಜೀವನೋಪಾಯ ಯೋಜನೆಯಿಂದ ಬದುಕಿಗೆ ದಾರಿ :  ಮೇಳದಲ್ಲಿ ಭಾಗವಹಿಸಿರುವ ರಾಷ್ಟ್ರೀಯ ಜೀವನೋಪಾಯ ಯೋಜನೆಯ ಫಲಾನುಭವಿ ಮಂಗಳ ನಾಗರಾಜ್ ಮಾತನಾಡಿ, “ಕೇಂದ್ರ ಸರ್ಕಾರದ ಯೋಜನೆಯಿಂದ ಕುಂಬಾರಿಕೆಯಲ್ಲಿ ವಿವಿಧ ಕಲಾಕೃತಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇವೆ. ಈ ಯೋಜನೆ ನಮಗೆ ಅತ್ಯಂತ ಉಪಯುಕ್ತವಾಗಿದ್ದು, ಬದುಕಿಗೆ ದಾರಿ ಮಾಡಿಕೊಟ್ಟಿದೆ,” ಎಂದು ಹೇಳಿದರು.

ಮಲೆನಾಡಿನ ಹಸೆ ಚಿತ್ತಾರಕ್ಕೆ ಮಾರುಕಟ್ಟೆ ನಿರ್ಮಾಣ:  ಅಶ್ವಿನಿ ದೇವಗಂಗೆ ಮಾತನಾಡಿ, ಮಲೆನಾಡಿನ ಸಾಂಪ್ರದಾಯಿಕ ಹಸೆ ಚಿತ್ತಾರವನ್ನು ನಾವು ನಿರಂತರವಾಗಿ ಬರೆಯುತ್ತಾ ಬಂದಿದ್ದೇವೆ. ಇದಕ್ಕೆ ಮಾರುಕಟ್ಟೆ ನಿರ್ಮಿಸುವ ಕೆಲಸ ಮಾಡುತ್ತಿದ್ದೇವೆ. ಜಿಲ್ಲಾ ಪಂಚಾಯತ್‌ ರಾಷ್ಟ್ರೀಯ ಜೀವನೋಪಾಯ ಯೋಜನೆಯ ಮೂಲಕ ಬೆನ್ನೆಲುಬಾಗಿ ನಿಂತು ಸಹಕಾರ ನೀಡುತ್ತಿದೆ,” ಎಂದು ತಿಳಿಸಿದರು.

ಮೇಳಕ್ಕೆ ಜನರ ನಿರಂತರ ಭೇಟಿ : ಸಿರಿಧಾನ್ಯ ಮೇಳ ಹಾಗೂ ಕರಕುಶಲ ಉತ್ಸವದಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ದೊರೆಯುತ್ತಿದ್ದು, ಗ್ರಾಮೀಣ ಕಲೆ ಮತ್ತು ಕೃಷಿ ಆಧಾರಿತ ಉದ್ಯಮಗಳಿಗೆ ಉತ್ತೇಜನ ಸಿಕ್ಕಿದೆ. ಸಾರ್ವಜನಿಕರಿಂದ ನಿರಂತರವಾಗಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

6 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

12 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

13 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

13 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

13 hours ago

ಕೃಷಿ ಆಧಾರಿತ ಕೈಗಾರಿಕೆ ಉತ್ತೇಜನದಿಂದ ರೈತರ ಭವಿಷ್ಯ ರೂಪಾಂತರ

ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…

13 hours ago