ಶಿವಂ ಶಿವೋಹಂ | ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ | ಸಾಗಿಬರುತ್ತಿರುವ ಪಾದಯಾತ್ರಿಗಳು | ಭಕ್ತಾದಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ |

February 16, 2023
7:19 PM

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ ನಡೆಯುವ ಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಮೊದಲಾದ ಊರುಗಳಿಂದ ಪ್ರತಿ ವರ್ಷದಂತೆ ವಿವಿಧ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತಾದಿಗಳು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. ಸುಮಾರು ಐವತ್ತು ಸಾವಿರ ಮಂದಿ ಪಾದಯಾತ್ರಿಗಳು ಈಗಾಗಲೆ ಧರ್ಮಸ್ಥಳಕ್ಕೆ ಬರುವುದಾಗಿ ಹೆಸರು ನೋಂದಾಯಿಸಿದ್ದಾರೆ.

Advertisement

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಂಗಣ, ಅನ್ನಪೂರ್ಣ ಛತ್ರದ ಹಿಂಭಾಗ, ಗಂಗೋತ್ರಿ, ಸಾಕೇತ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಸ್ವಾಗತ ಕಾರ್ಯಾಲಯ ಹಾಗೂ ಮಾಹಿತಿ ಕಾರ್ಯಾಲಯ ತೆರೆದಿದ್ದು ಪಾದಯಾತ್ರಿಗಳ ಸ್ವಾಗತ ಮತ್ತು ಆತಿಥ್ಯಕ್ಕೆ ಸ್ವಯಂ ಸೇವಕರ ತಂಡ ಸಜ್ಜಾಗಿದೆ.

ಎಸ್.ಡಿ.ಎಂ. ಆಸ್ಪತ್ರೆಯ ಆಶ್ರಯದಲ್ಲಿ15 ಮಂದಿ ವೈದ್ಯರ ತಂಡ ಪಾದಯಾತ್ರಿಗಳ ಉಚಿತ ಸೇವೆಗೆ ಸಿದ್ದರಾಗಿದ್ದಾರೆ.
ಶಿವರಾತ್ರಿ ಜಾಗರಣೆ, ಉಪವಾಸ: ಶನಿವಾರ ಸಂಜೆ ಆರು ಗಂಟೆಗೆ ಧರ್ಮಸ್ಥಳದಲ್ಲಿ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡುವರು. ಅವರ ಪ್ರವಚನದ ಬಳಿಕ ಇಡೀ ರಾತ್ರಿ ಭಕ್ತರು ಶಿವನಾಮ ಸ್ಮರಣೆ, ಭಜನೆ, ಪ್ರಾರ್ಥನೆ, ಧ್ಯಾನದೊಂದಿಗೆ ಜಾಗರಣೆ ಮಾಡುವರು.

ದೇವಸ್ಥಾನದಲ್ಲಿ ಸಂಜೆ ಆರು ಗಂಟೆಯಿಂದ ನಾಲ್ಕು ಜಾವಗಳಲ್ಲಿ ಅಹೋರಾತ್ರಿ ಭಕ್ತರು ಶತರುದ್ರಾಭಿಷೇಕ, ಎಳನೀರು ಅಭಿಷೇಕ ಮಾಡಿ ಧನ್ಯತೆಯನ್ನು ಹೊಂದುವರು. ರಾತ್ರಿ ಇಡೀ ದೇವರ ದರ್ಶನಕ್ಕೆ ಅವಕಾಶವಿದ್ದು ಭಾನುವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯುತ್ತದೆ.  ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಕೆ.ಎಸ್.ಆರ್.ಟಿ.ಸಿ. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group