ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭ ಶಿವಪಂಚಾಕ್ಷರಿ ಪಠಣದೊಂದಿಗೆ ಅಹೋರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಶುಭಹಾರೈಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು,” ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿ ಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂ ಅಗತ್ಯ ಬೇಕಾಗಿದೆ ಎಂದು ಹೇಳಿದರು. ನಮ್ಮೆಲ್ಲರ ಸುಖ-ಶಾಂತಿ, ನೆಮ್ಮದಿಯೊಂದಿಗೆ ವಿಶ್ವಶಾಂತಿಗಾಗಿ ನಾವು ಪಾರ್ಥನೆ ಮಾಡಬೇಕಾದ ಅನಿವಾರ್ಯತೆ ಹಾಗೂ ಸಂಕ್ರಮಣಕಾಲದಲ್ಲಿ ನಾವು ಈಗ ಇದ್ದೇವೆ. ಧರ್ಮದ ಬಗ್ಗೆ ತಿಳಿವಳಿಕೆ ಇದ್ದುಆಚರಣೆ ಮಾಡಿದರೆಅದು ಹೆಚ್ಚು ಫಲಪ್ರದವಾಗುತ್ತದೆ.ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಪಾಲನೆಯೊಂದಿಗೆ ಎಲ್ಲರೂ ಸಚ್ಚಾರಿತ್ರ್ಯದ ಸುಜ್ಞಾನಿ ಭಕ್ಷರಾಗಬೇಕು.ಹಿತ-ಮಿತಆಹಾರ ಸೇವನೆಯೊಂದಿಗೆ ಶಿಸ್ತು, ಸಂಯಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೆಗ್ಗಡೆಯವರು ಹೇಳಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮಾತನಾಡಿ ಜಾಗರಣೆಯೊಂದಿಗೆ ಅಂತರಂಗ ಹಾಗೂ ಬಹಿರಂಗದಲ್ಲಿ ಭಕ್ತರು ಪರಿಶುದ್ಧರಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು.ಭಾವಶುದ್ಧಿ, ಕರ್ಮಶುದ್ಧಿ ಮತ್ತು ಮನಶುದ್ಧಿಯೊಂದಿಗೆ ಸಾರ್ಥಕಜೀವನ ನಡೆಸಬೇಕುಎಂದು ಹೇಳಿದರು.
ಪಾದಯಾತ್ರೆಯ ರೂವಾರಿ ಬೆಂಗಳೂರಿನ ಹನುಮಂತಪ್ಪಗುರೂಜಿ ಮತ್ತು ಮರಿಯಪ್ಪಗೌಡ ಉಪಸ್ಥಿತರಿದ್ದರು.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…