ಲೋಕ ಕಲ್ಯಾಣಾರ್ಥವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಅತ್ಯಪರೂಪದ ಸೋಮ ಸಪರ್ಯಾ ಪೂಜೆಯು ಸೋಮವಾರ ಸಂಜೆ ಪ್ರದೋಷ ಕಾಲದಲ್ಲಿ ನಡೆಯಿತು. 2500 ಕ್ಕೂ ಅಧಿಕ ರುದ್ರಪಾಠಕರಿಂದ ಏಕಕಂಠದಲ್ಲಿ ಶ್ರೀರುದ್ರಪಠಣ ನಡೆಯುತ್ತಿರಬೇಕಾದರೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀ ಚಂದ್ರಮೌಳೀಶ್ವರ ದೇವರಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ಮೂರು ವರ್ಷಗಳಿಂದ ವಿಶ್ವದ ಎಲ್ಲೆಡೆಯ ಆತಂಕದ ಸ್ಥಿತಿಗೆ ಜನರಿಗೆ ನೆಮ್ಮದಿಯ ಜೀವನ ಬೇಕಿದೆ. ಎಲ್ಲ ಆತಂಕಗಳು ದೂರವಾಗಿ ನೆಮ್ಮದಿ ದೊರೆಯಲೆಂಬ ಸದಾಶಯದೊಂದಿಗೆ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಶರಾವತಿ ತೀರದಲ್ಲಿರುವ ಶ್ರೀ ಚಂದ್ರಮೌಳೀಶ್ವರನಿಗೆ ಶ್ರೀ ರಾಮಚಂದ್ರಾಪುರಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ವಿಶೇಷ ಪೂಜೆ ನಡೆಸಿದರು. ಗಂಗಾಜಲ ಹಾಗೂ ವಿವಿಧ ದ್ರವ್ಯಗಳ ಅಭಿಷೇಕ, ರಜತ ಮತ್ತು ಸುವರ್ಣ ಪುಷ್ಪಗಳ ಅಭಿಷೇಕ ನಡೆಸಿದರು. ಪ್ರದೋಷ ಕಾಲದಲ್ಲಿ ನಡೆಯುವ ಈ ಪೂಜೆಗೆ ಸೋಮ ಸಪರ್ಯಾ ಎಂದು ಹೇಳಲಾಗುತ್ತದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಆರ್.ಎಸ್.ಎಸ್ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ಹೊರನಾಡು ದೇವಾಲಯದ ಧರ್ಮದರ್ಶಿಗಳಾದ ಭೀಮೇಶ್ವರ ಜೋಶಿ, ಶಾಸಕರಾದ ಹರತಾಳು ಹಾಲಪ್ಪ, ಕುಂದಾಪುರದ ಶಾಸಕರಾದ ಸುಕುಮಾರ ಶೆಟ್ಟಿ, ಆರ್ ಎಸ್ ಎಸ್ ಪ್ರಮುಖರಾದ ಪ್ರಕಾಶ್ ಮೊದಲಾದವರು ಭಾಗವಹಿಸಿದ್ದರು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…