ಕಾಂಗ್ರೆಸ್ ವಿರುದ್ಧ ಹಣ ಪಡೆದು ಟಿಕೆಟ್ ಕೊಟ್ಟ ಆರೋಪ ಮಾಡಿದ ಬಿಜೆಪಿ | ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

April 22, 2023
11:31 AM

 ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡುವ ಅಧಿಕೃತ ವ್ಯಕ್ತಿಯಾಗಿದ್ದಾರೆ. ಆದರೆ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚ ಸ್ವೀಕರಿಸಿದಂತೆ. ಇದು ಚುನಾವಣೆಯ ಕಾನೂನು ಮತ್ತು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕಾಂಗ್ರೆಸ್​ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Advertisement
Advertisement
Advertisement

ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ : ಕರ್ನಾಟಕ ವಿಧಾನಸಭಾ ಚುನಾವಣೆ 2023ಗೆ ಅಭ್ಯರ್ಥಿಗಳಿಗೆ ಟಿಕೆಟ್​ ಕೊಡಲು ಪ್ರತಿ ಆಕಾಂಕ್ಷಿಯಿಂದ ಹಣವನ್ನು ಸಂಗ್ರಹಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಕ್ಕನ್ನು ಚಲಾಯಿಸಲು, ಹಣ ತೆಗೆದುಕೊಂಡದರೆ ಅದು ಲಂಚ ತೆಗೆದುಕೊಂಡಂತಾಗುತ್ತದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ ಮಾಡಲಾಗಿದೆ.

Advertisement

ಇನ್ನು, ಟಿಕೆಟ್​ ಆಕಾಂಕ್ಷಿಗಳು ಹಣ ನೀಡಿರುವುದರಿಂದ ಅಭ್ಯರ್ಥಿ ಸಹ ಹಣ ಪಾವತಿ ಮಾಡಿರುತ್ತಾರೆ ಎಂಬುವುದು ಸ್ಪಷ್ಟವಾಗಿದೆ. ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ನೀಡುವುದು ಸಹ ಕಾನೂನು ಬಾಹಿರವಾಗಿದೆ. ಸದ್ಯ ಕಾಂಗ್ರೆಸ್ ಪಕ್ಷ, ಡಿ.ಕೆ ಶಿವಕುಮಾರ್ ತಮ್ಮ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮವಾಗಿದೆ. ಅವುಗಳನ್ನು ತಿರಸ್ಕರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಟಿಕೆಟ್​ ಆಕಾಂಕ್ಷಿಗಳಿಂದ ಸುಮಾರು 23 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಸುಮಾರು 1,350 ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಪಕ್ಷದ ಟಿಕೆಟ್​ ಪಡೆದುಕೊಳ್ಳಲು ಹಣ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಸಾರ ಆಗಿದೆ. ಲಂಚ ಪಡೆದು ಕಾಂಗ್ರೆಸ್ ಟಿಕೆಟ್ ನೀಡಿರುವುದು ಮಾಧ್ಯಮಗಳ ವರದಿಗಳಲ್ಲಿ ಸ್ಪಷ್ಟವಾಗಿದೆ.

Advertisement

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮನವಿ: ಚುನಾವಣಾ ಪ್ರಕ್ರಿಯೆಯಲ್ಲಿ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸಲು ಬಿಡದೆ ಮಧ್ಯ ಪ್ರವೇಶ ಮಾಡಿದೆ. ಹಣ ಪಡೆದು ಆಕಾಂಕ್ಷಿಗಳಿಗೆ ಬಿ ಪಾರಂ ನೀಡುವುದು ಕಾನೂನುಬಾಹಿರ. ಇದು ಚುನಾವಣಾ ಪ್ರಕ್ರಿಯೆಗೆ ಕಳಂಕವಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಕೋರಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ನೀಡಿದ ಎಲ್ಲಾ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು. ನ್ಯಾಯ ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror