ಹೆಸರು ಬದಲಾಯಿಸುತ್ತಾರಾ ಶೋಭಾ ಕರಂದ್ಲಾಜೆ…? | ಶುರುವಾಗಿದೆ ಚರ್ಚೆ |

September 29, 2022
3:04 PM

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗವಾದ ಕರಂದ್ಲಾಜೆ ಎಂಬ ಹೆಸರು ದೇಶದಾದ್ಯಂತ ಹೆಸರು ಮಾಡಿತ್ತು. ಇದಕ್ಕೆ ಕಾರಣರಾದವರು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಡಿದೆ. ಶೋಭಾ ಕರಂದ್ಲಾಜೆ ಬದಲಾಗಿ ಶೋಭಾ ಗೌಡ ಎಂದು ಹೆಸರು ಬದಲಾಯಿಸುತ್ತಾರೆ ಎನ್ನುವುದು ಈಗಿನ ಸುದ್ದಿ. ಆದರೆ ಶೋಭಾ ಕರಂದ್ಲಾಜೆ ಅವರು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ.

ಹೆಸರನ್ನು ಬದಲಾಯಿಸಿಕೊಳ್ಳುವ ಉದ್ದೇಶ, ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಅಂತಹ ಬದಲಾವಣೆಗಳು ಹಿಂದೆಯೂ ನಡೆದಿದೆ. ಸುಳ್ಯದಿಂದ ಪುತ್ತೂರಿನಲ್ಲಿ ಚುನಾವಣೆಗೆ ಸ್ಫರ್ಧೆ ಮಾಡಿರುವ ಡಿ.ವಿ.ಸದಾನಂದ ಗೌಡ ಅವರೂ ತನ್ನ ಹೆಸರನ್ನು ಚುನಾವಣೆಯ ಕಾರಣದಿಂದ ಬದಲಾಯಿಸಿಕೊಂಡಿದ್ದರು. ಇದೇ ರೀತಿ ಚುನಾವಣೆಯಲ್ಲಿ ಮೊದಲ ಸಾಲಿನಲ್ಲಿ ಹೆಸರು ಬರಲೂ ಹೆಸರನ್ನು ಬದಲಾಯಿಸಿಕೊಂಡ ಉದಾಹರಣೆ ಇದೆ. ಈಗ ಚುನಾವಣೆ ಸಮೀಪಿಸುತ್ತಿರುವುದರಿಂದ ಜಾತಿ ಲೆಕ್ಕಾಚಾರಗಳೇ ಪ್ರಮುಖವಾಗುವ ಕಾರಣದಿಂದ ಒಕ್ಕಲಿಗ ಸಮುದಾಯದ ಮತಗಳನ್ನು ಗಟ್ಟಿಪಡಿಸಲು ಹಳೆ ಮೈಸೂರು ಭಾಗದಲ್ಲಿ ಶೋಭಾ ಗೌಡ ಎಂಬ ಹೆಸರಿನ ಮೂಲಕ ಮತ ಪ್ರಚಾರ ಹಾಗೂ ಚುನಾವಣೆ ಕಡೆಗೂ ಗಮನಹರಿಸಲಾಗಿದೆ ಎನ್ನುವುದು ಚರ್ಚೆಯ ವಿಷಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror