ಬೆಂಗಳೂರಿನಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ | ರಾಜ್ಯಸಭೆಯಲ್ಲಿ ನೀರಿನ ಸಮಸ್ಯೆ ಬಗ್ಗೆ ಮಾತನಾಡಿದ ದೇವೇ ಗೌಡ | ಮೇಕೆದಾಟು ಯೋಜನೆಗೆ ಪಕ್ಷಾತೀತವಾಗಿ ಯೋಜನೆ ಬೆಂಬಲಿಸಲು ದೇವೇಗೌಡ ಮನವಿ

December 5, 2024
7:15 AM

ಬೆಂಗಳೂರು ನಗರ , ಕುಡಿಯುವ ನೀರಿನ ಕೊರತೆಯಂತಹ  ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದರು.

ನಗರದ ಜನಸಂಖ್ಯೆ ಸುಮಾರು 1.45 ಕೋಟಿ ಮೀರಿದ್ದು, ಎಲ್ಲ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸುವುದು ದುಸ್ತರವಾಗಿದೆ.  ಈ ಮಧ್ಯೆ ಖಾಸಗಿ ಟ್ಯಾಂಕರ್ ಗಳು , ಪ್ರತಿ ಟ್ಯಾಂಕ್ ನೀರಿಗೆ 1 ಸಾವಿರದ 200 ರೂಪಾಯಿಯಿಂದ 3 ಸಾವಿರದ ವರೆಗೆ ಶುಲ್ಕ ಪಡೆಯುತ್ತಿದ್ದು, ಸಾಮಾನ್ಯ ಜನರಿಗೆ ದುಬಾರಿಯಾಗಿ ಪರಿಣಮಿಸಿದೆ.  ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದರು. ಹಿಂದೆ ಕೆರೆಗಳ ನಗರವಾಗಿದ್ದ ಬೆಂಗಳೂರು, ಒತ್ತುವರಿ ಕಾರಣದಿಂದಾಗಿ ನೀರಿನ ಮೂಲಗಳನ್ನು ಕಳೆದುಕೊಂಡಿದ್ದು, ಅಂತರ್ಜಲ ಕುಸಿದಿದೆ.  ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ರಾಜಕೀಯ ಹೊರತುಪಡಿಸಿ, ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಕೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror