24.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಫೆಬ್ರವರಿ 24 ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.
ಮಲೆನಾಡು : ಕೊಡಗಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಫೆಬ್ರವರಿ 25 ರಿಂದ ಮಳೆಯ ಸಾಧ್ಯತೆ ಕಡಿಮೆ ಇರಲಿದ್ದು, ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಫೆಬ್ರವರಿ 27 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.