02.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣಾಂಶ ಏರಿಕೆಯ ಜೊತೆಗೆ ಕರಾವಳಿ ತೀರ ಭಾಗಗಳಲ್ಲಿ ವಾತಾವರಣದಲ್ಲಿ ತೇವಾಂಶವೂ ಸ್ವಲ್ಪ ಜಾಸ್ತಿ ಇರಬಹುದು. ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಂದರೆ, ಕಾಸರಗೋಡು, ಮಂಗಳೂರು, ಬಂಟ್ವಾಳ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿಯ ವೇಳೆ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ರಾತ್ರಿ ಹೆಚ್ಚಿನ ಸಮಯ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ರಾತ್ರಿಯ ವೇಳೆ ಸೆಖೆಯ ವಾತಾವರಣದ ಸಾಧ್ಯತಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ರಾತ್ರಿಯ ವೇಳೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನ ಮಾರ್ಚ್ 4ರಿಂದ ಮೋಡ ಹೆಚ್ಚಾಗದ್ದು, ಒಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಈಗಿನಂತೆ ಮಾರ್ಚ್ 5 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿದ್ದರೂ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ.
ದಕ್ಷಿಣ ಶ್ರೀಲಂಕಾ ಬಳಿ ತಲುಪಿರುವ ತಿರುವಿಕೆಯು ಇಂದು ಅರಬ್ಬಿ ಸಮುದ್ರ ಪ್ರವೇಶಿಸುವ ಹಂತದಲ್ಲಿದೆ.