ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

February 23, 2025
11:41 AM
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ

24.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಒಂದೆರಡು ಕಡೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಫೆಬ್ರವರಿ 24 ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಫೆಬ್ರವರಿ 25 ರಿಂದ ಮಳೆಯ ಸಾಧ್ಯತೆ ಕಡಿಮೆ ಇರಲಿದ್ದು, ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಫೆಬ್ರವರಿ 27 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror