29.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅರಬ್ಬಿ ಸಮುದ್ರ ಕಡೆಯಿಂದ ಗಾಳಿ ಬೀಸುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಹೀಗೆ ಮುಂದುವರಿಯುವ ಲಕ್ಷಣಗಳಿದ್ದು, ಅಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಮೋಡದ ವಾತಾವರಣದ ಸಾಧ್ಯತೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 1ರಿಂದ ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ನವೆಂಬರ್ 1 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಿಗೆ ಅರಬ್ಬಿ ಸಮುದ್ರದ ಮೂಲಕ ಗಾಳಿ ಬೀಸುತ್ತಿದ್ದು, ಉತ್ತರ ಒಳನಾಡಿನಲ್ಲಿ ಉತ್ತರ ಭಾರತದ ಕಡೆಯಿಂದ ಗಾಳಿ ಬೀಸುತ್ತಿದೆ. ಇದರಿಂದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…