14.01.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ತಡ ರಾತ್ರಿ ಸುಳ್ಯ, ಕಾಸರಗೋಡು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 14 ರಂದು ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ ತಾಪಮಾನ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ರಾತ್ರಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಆಗುಂಬೆ, ಶೃಂಗೇರಿ, ಕುದುರೆಮುಖ ಸ ಭಾಗಗಳಲ್ಲಿ ಅಲ್ಲಲ್ಲಿ ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಸಹ ಮಲೆನಾಡಿನ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆ ಕಡಿಮೆಯಾದರೂ ಛಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಕಾಣಿಸುತ್ತಿಲ್ಲ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ( ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲಲ್ಲಿ ಮುಂಜಾನೆಯೇ ತುಂತುರು ಮಳೆಯಾಗಿದೆ). ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜನವರಿ 14ರಿಂದ ಮಳೆ ಕಡಿಮೆಯಾಗಿ ಸ್ವಲ್ಪ ಮಟ್ಟಿಗೆ ತಾಪಮಾನ ಏರಿಕೆಯಾಗುವ ಲಕ್ಷಣಗಳಿವೆ.
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಇರಲಾರದು.
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ…
ಆಹಾರೋತ್ಪಾದನೆಯ ಕ್ಷೇತ್ರದಲ್ಲಿ ಹಾಲಿ ಉತ್ಪಾದನೆಯ ಪಾತ್ರ ಅತ್ಯಂತ ಪ್ರಮುಖವಾಗಿದೆ. ಭಾರತದಲ್ಲಿ ಆಹಾರ ಪದಾರ್ಥಗಳಿಗಾಗಿ…