06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 6 ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಡಿಸೆಂಬರ್ 8 ರ ನಂತರ ಒಣ ಹವೆ ಆವರಿಸಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಡಿಸೆಂಬರ್ 6 ರಿಂದ ಬಿಸಿಲು ಹಾಗೂ ಮೋಡ ಮಾತ್ರ ಇರಲಿದ್ದು, 8 ರಿಂದ ಒಣ ಹವೆಯೊಂದಿಗೆ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 6ರಿಂದ ಒಣ ಹವೆ ಆವರಿಸಿ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಶೀತ ಗಾಳಿಯು ಹಿಂಗಾರು ಮಾರುತಗಳನ್ನು ದುರ್ಬಲಗೊಳಿಸುತ್ತಿದ್ದು, ಡಿಸೆಂಬರ್ 6 ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸಿ 8 ರಿಂದ ಚಳಿ ಹೆಚ್ಚಾಗಲು ಪ್ರಾರಂಭವಾಗಬಹುದು.



