Advertisement
ವೆದರ್ ಮಿರರ್

ಹವಾಮಾನ ವರದಿ | 05-12-2025 | ಕೆಲವು ಕಡೆ ತುಂತುರು ಮಳೆ – ಡಿ.8 ರಿಂದ ಚಳಿ ನಿರೀಕ್ಷೆ

Share

06.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 6 ರಿಂದ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಡಿಸೆಂಬರ್ 8 ರ ನಂತರ ಒಣ ಹವೆ ಆವರಿಸಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ಆಗುಂಬೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಡಿಸೆಂಬರ್ 6 ರಿಂದ ಬಿಸಿಲು ಹಾಗೂ ಮೋಡ ಮಾತ್ರ ಇರಲಿದ್ದು, 8 ರಿಂದ ಒಣ ಹವೆಯೊಂದಿಗೆ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 6ರಿಂದ ಒಣ ಹವೆ ಆವರಿಸಿ ಚಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಶೀತ ಗಾಳಿಯು ಹಿಂಗಾರು ಮಾರುತಗಳನ್ನು ದುರ್ಬಲಗೊಳಿಸುತ್ತಿದ್ದು, ಡಿಸೆಂಬರ್ 6 ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸಿ 8 ರಿಂದ ಚಳಿ ಹೆಚ್ಚಾಗಲು ಪ್ರಾರಂಭವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

16 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

16 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

16 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

16 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago