ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಡಾ. ಗಣೇಶ್ ಪ್ರಸಾದ್ ಮುದ್ರಾಜೆ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…