Advertisement
ಸುದ್ದಿಗಳು

ಶ್ರೀಕೃಷ್ಣ ಜನ್ಮಾಷ್ಟಮಿ | ವಿಶ್ವದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ | ಆಚರಣೆ ಹೇಗೆ ? ಏನು ಮಾಡಬೇಕು ?

Share

ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ: ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ ಆಚರಿಸಲಾಗುತ್ತದೆ. ಈ ದಿನ ಬೃಂದಾವನದಲ್ಲಿ ಡೋಲೋತ್ಸವವಾಗುತ್ತದೆ. ಅದು ನೋಡಲು ಆನಂದದಾಯಕವಾಗಿರುತ್ತದೆ. ಇತರ ಕ್ಷೇತ್ರಗಳ ಅನೇಕ ಸ್ಥಳಗಳಲ್ಲಿ ಶ್ರೀಕೃಷ್ಣನ ದೇವಾಲಯದಲ್ಲಿ ಈ ಉತ್ಸವವನ್ನು ಆಚರಿಸಲಾಗುತ್ತದೆ. ಈ ದಿನ ಕೆಲವರು ತಮ್ಮ ಮನೆಯಲ್ಲಿಯೇ ಗೋಕುಲ-ಬೃಂದಾವನದಂತೆ ಪ್ರತಿರೂಪ ಮಾಡಿ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸುತ್ತಾರೆ. ವೈಷ್ಣವ ಪಂಥೀಯರು ಈ ದಿನವನ್ನು ಅತೀವ ಭಕ್ತಿಭಾವದಿಂದ ಆಚರಿಸುತ್ತಾರೆ. ಅನೇಕ ವೈಷ್ಣವ ದೇವಾಲಯಗಳಲ್ಲಿ ದೀಪಾರಾಧನೆ, ಶೋಭಾಯಾತ್ರೆ, ಕೃಷ್ಣಲೀಲೆ, ಭಾಗವತ ಪಠಣ, ಕೀರ್ತನೆ, ಭಜನೆ, ನೃತ್ಯ-ಗಾಯನ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಈ ಕಾರ್ಯಕ್ರಮವು ಶ್ರಾವಣ ಕೃಷ್ಣ ಪಾಡ್ಯದಿಂದ ಶ್ರಾವಣ ಕೃಷ್ಣಾಷ್ಟಮಿಯವರೆಗೂ ನಡೆಯುತ್ತದೆ.

ಶ್ರೀಕೃಷ್ಣಜನ್ಮಾಷ್ಟಮಿ ವ್ರತ: ಈ ವ್ರತವನ್ನು ಅಷ್ಟಮಿಯಂದು ಮಾಡಲಾಗುತ್ತದೆ ಮತ್ತು ಎರಡನೆಯ ದಿನ ಅರ್ಥಾತ್ ಶ್ರಾವಣ ಕೃಷ್ಣ ನವಮಿಯಂದು ಪಾರಾಯಣ ಮಾಡಿ ವ್ರತವನ್ನು ಸಂಪನ್ನಗೊಳಿಸುತ್ತಾರೆ. ಈ ವ್ರತವು ಎಲ್ಲರೂ ಮಾಡುವಂತಹದ್ದಾಗಿದೆ. ಈ ವ್ರತವನ್ನು ಮಕ್ಕಳು, ಯುವಕರು, ವೃದ್ಧರು, ಸ್ತ್ರೀ- ಪುರುಷರು ಎಲ್ಲರೂ ಮಾಡಬಹುದು. ಪಾಪನಾಶ, ಸೌಖ್ಯವೃದ್ಧಿ, ಸಂತತಿ-ಸಂಪತ್ತಿ ಮತ್ತು ವೈಕುಂಠ ಪ್ರಾಪ್ತಿಯು ಈ ವ್ರತದ ಫಲವಾಗಿದೆ.

ಶ್ರೀಕೃಷ್ಣಜನ್ಮಾಷ್ಟಮಿಯ ವ್ರತಕ್ಕೆ ಸಂಬಂಧಿಸಿದ ಉಪವಾಸ: ಈ ದಿನ ದಿನವಿಡೀ ಉಪವಾಸವನ್ನು ಮಾಡಲಾಗುತ್ತದೆ. ನಿರಾಹಾರ ಉಪವಾಸವು ಸಾಧ್ಯವಿಲ್ಲದಿದ್ದರೆ ಫಲಾಹಾರ ಮಾಡಬಹುದು. ಇದಕ್ಕೆ ಒಂದು ದಿನ ಮುಂಚೆ ಅರ್ಥಾತ್ ಶ್ರಾವಣ ಕೃಷ್ಣ ಸಪ್ತಮಿಯಂದು ಅಂಶಾತ್ಮಕ ಭೋಜನವನ್ನು ಮಾಡುತ್ತಾರೆ.

ಶ್ರೀಕೃಷ್ಣಜನ್ಮಾಷ್ಟಮಿಯ ಪೂಜಾವಿಧಿ: ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ. ಭಗವಾನ ಶ್ರೀಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದ್ದನು. ಆದುದರಿಂದ ಶ್ರೀಕೃಷ್ಣನ ವಿಶೇಷ ಪೂಜೆಯನ್ನು ಮಧ್ಯರಾತ್ರಿಯಲ್ಲಿ ಮಾಡಲಾಗುತ್ತದೆ. ಮಧ್ಯರಾತ್ರಿ ಸ್ನಾನವನ್ನು ಮಾಡಿ ಪೂಜೆಯನ್ನು ಆರಂಭಿಸಲಾಗುತ್ತದೆ. ‘ಭಗವಾನ ಶ್ರೀಕೃಷ್ಣನ ಜನ್ಮವಾಗಿದೆ’ ಎಂಬ ಧಾರಣೆಯಿಂದ ಪೂಜೆಯನ್ನು ಮಾಡಬೇಕು.

ಪೂಜೆಯ ತಯಾರಿ:

1. ಪೂಜೆಗೆ ಮಣೆಯ ಮೇಲೆ ಭಗವಾನ ಶ್ರೀಕೃಷ್ಣನ ಮೂರ್ತಿಯನ್ನು ಇಡಿರಿ.
2. ಅನಂತರ ಶ್ರೀಕೃಷ್ಣನ ಮೂರ್ತಿಗೆ ಚಂದನ ತಿಲಕವನ್ನು ಹಚ್ಚಿರಿ.
3. ಅನಂತರ ಪುಷ್ಪವನ್ನು ಅರ್ಪಿಸಿರಿ.
4. ಸಾಧ್ಯವಿದ್ದಲ್ಲಿ ಕೃಷ್ಣಕಮಲವನ್ನು ಅರ್ಪಿಸಿರಿ.
5. ಈಗ ಶ್ರೀ ಕೃಷ್ಣನಿಗೆ ತುಳಸಿಯನ್ನು ಅರ್ಪಿಸಿರಿ.
6. ಸಾಧ್ಯವಿದ್ದಲ್ಲಿ ತುಳಸಿಯ ಮಾಲೆಯನ್ನು ಅರ್ಪಿಸಿರಿ.
7. ಈಗ ಊದುಬತ್ತಿಯನ್ನು ತೋರಿಸಿರಿ. ಎರಡು ಊದುಬತ್ತಿಗಳನ್ನು ತೆಗೆದುಕೊಂಡು ದಕ್ಷಿಣಾವರ್ತದಲ್ಲಿ ಮೂರು ಬಾರಿ ಸುತ್ತಿಸಿ.
8. ಈಗ ದೀಪವನ್ನು ತೋರಿಸಿ.
9. ಈಗ ಮೊಸರವಲಕ್ಕಿಯ ನೈವೇದ್ಯ ವನ್ನು ನಿವೇದಿಸಿ.
10. ಪ್ರದಕ್ಷಿಣೆ: ಪೂಜಾವಿಧಿಯ ನಂತರ ಸಾಧ್ಯವಿದ್ದರೆ ಭಗವಾನ ಶ್ರೀಕೃಷ್ಣನಿಗೆ ಕಡಿಮೆಯೆಂದರೆ ಮೂರು ಅಥವಾ ಮೂರರ ಪಟ್ಟಿನಲ್ಲಿ ಪ್ರದಕ್ಷಿಣೆಯನ್ನು ಹಾಕಿರಿ. ಪ್ರದಕ್ಷಿಣೆಯನ್ನು ಹಾಕುವುದು ಸಾಧ್ಯವಿಲ್ಲದಿದ್ದಲ್ಲಿ ನಿಂತಲ್ಲಿಯೇ ಸುತ್ತ ತಿರುಗಿ ಪ್ರದಕ್ಷಿಣೆ ಹಾಕಿರಿ.
11. ಅನಂತರ ಶರಣಾಗತ ಭಾವದಿಂದ ನಮಸ್ಕಾರ ಮಾಡುತ್ತಾ ಪ್ರಾರ್ಥನೆಯನ್ನು ಮಾಡಿರಿ.
12. ಅಂತ್ಯದಲ್ಲಿ ಎಲ್ಲರೊಂದಿಗೆ ಪ್ರಸಾದವನ್ನು ಗ್ರಹಿಸಿ.
ಇಲ್ಲಿ ಗಮನದಲ್ಲಿಡಲು ಯೋಗ್ಯವಾಗಿರುವ ಅಂಶವೆಂದರೆ, ಪೂಜಾವಿಧಿಯಲ್ಲಿ ಸಂಪ್ರದಾಯ, ಪ್ರದೇಶ, ರೂಢಿ ಇತ್ಯಾದಿಗಳಿಗನುಸಾರ ಸ್ವಲ್ಪ ವ್ಯತ್ಯಾಸವಾಗಬಹುದು.

ಶ್ರೀಕೃಷ್ಣಜನ್ಮಾಷ್ಟಮಿಯಂದು ಇವುಗಳನ್ನು ಮಾಡಿ..! :

1. ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ!
2. ಶ್ರೀಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ!
3. ಶ್ರೀಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ!
4. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’

ನಾಮಜಪವನ್ನು ಮಾಡಿ..! : ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ 1 ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.

ಕೃಷ್ಣಗಾಯತ್ರಿ:

ದೇವಕೀನಂದನಾಯ ವಿದ್ಮಹೇ | ವಾಸುದೇವಾಯ ಧೀಮಹಿ | ತನ್ನೋ ಕೃಷ್ಣಃ ಪ್ರಚೋದಯಾತ್ ||

ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.

ಬರಹ :
ಸಂಗ್ರಹ : ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

11 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

19 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

20 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

21 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago