ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತ ಕೀಳಬೇಕು | ಶ್ಯಾಂ ಭಟ್

September 26, 2024
8:15 PM

ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ  ಬುಡ ಸಮೇತ ತೆಗೆದು ಹಾಕಬೇಕೆಂದು  ಮಾನವ ಹಕ್ಕುಗಳ ಅಯೋಗದ  ಅಧ್ಯಕ್ಷರಾದ ಶ್ಯಾಂಭಟ್ ತಿಳಿಸಿದ್ದಾರೆ. 

Advertisement

ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.  ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.  ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ  ಅವರು. ಗ್ರಾಮದಲ್ಲಿ ಬಹಿಷ್ಕಾರವನ್ನು  ಹಾಕಿರುವಂತಹ  ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ
July 8, 2025
10:30 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ
July 8, 2025
8:44 PM
by: The Rural Mirror ಸುದ್ದಿಜಾಲ
ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?
July 8, 2025
8:15 PM
by: The Rural Mirror ಸುದ್ದಿಜಾಲ
ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?
July 8, 2025
8:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group