ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.
ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಟಿಕೆಟ್ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.
ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…