ವರುಣಾದಲ್ಲಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ ಪ್ಲಾನ್ | ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ…? |

April 6, 2023
8:36 PM

ಮಾಜಿ ಸಿಎಂ ಜೊತೆಗೆ ಮುಂದಿನ ಸಿಎಂ ಆಕಾಂಕ್ಷಿ ಸಿದ್ದರಾಮಯ್ಯ. ಈಗ ಮತ್ತೆ ವರುಣಾದಲ್ಲಿ  ಸ್ಫರ್ಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಚುನಾವಣಾ ಕಣದಲ್ಲಿ ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈಗ ಪ್ರಬಲ ಅಭ್ಯರ್ಥಿಯ ಅಸ್ತ್ರವನ್ನು ಬಿಡಲು ಬಿಜೆಪಿ ಸಿದ್ಧವಾಗಿದೆ.ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.

Advertisement
Advertisement

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಮೊದಲು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ವಿಜಯೇಂದ್ರ ಅವರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ.

ಬಿಜೆಪಿ ಇದೀಗ ಮತ್ತೋರ್ವ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರತ್ತ ದೃಷ್ಟಿ ಹರಿಸಿದೆ. ಇದಕ್ಕೆ ವರುಣಾ ಕ್ಷೇತ್ರದಲ್ಲಿರುವ ಲಿಂಗಾಯತ ಸಮುದಾಯದ ಪ್ರಾಬಲ್ಯ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವಿ. ಸೋಮಣ್ಣ, ವರುಣಾ ಕ್ಷೇತ್ರದ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸಮರ್ಥರು ಎಂಬುದು ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ
ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ
May 22, 2025
9:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group