ಮಾಜಿ ಸಿಎಂ ಜೊತೆಗೆ ಮುಂದಿನ ಸಿಎಂ ಆಕಾಂಕ್ಷಿ ಸಿದ್ದರಾಮಯ್ಯ. ಈಗ ಮತ್ತೆ ವರುಣಾದಲ್ಲಿ ಸ್ಫರ್ಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ಚುನಾವಣಾ ಕಣದಲ್ಲಿ ಕಟ್ಟಿ ಹಾಕಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈಗ ಪ್ರಬಲ ಅಭ್ಯರ್ಥಿಯ ಅಸ್ತ್ರವನ್ನು ಬಿಡಲು ಬಿಜೆಪಿ ಸಿದ್ಧವಾಗಿದೆ.ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಲು, ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಮೊದಲು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ವಿಜಯೇಂದ್ರ ಅವರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಯಸಿದ್ದಾರೆ.
ಬಿಜೆಪಿ ಇದೀಗ ಮತ್ತೋರ್ವ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿದ್ದು, ವಸತಿ ಸಚಿವ ವಿ. ಸೋಮಣ್ಣ ಅವರತ್ತ ದೃಷ್ಟಿ ಹರಿಸಿದೆ. ಇದಕ್ಕೆ ವರುಣಾ ಕ್ಷೇತ್ರದಲ್ಲಿರುವ ಲಿಂಗಾಯತ ಸಮುದಾಯದ ಪ್ರಾಬಲ್ಯ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ವಿ. ಸೋಮಣ್ಣ, ವರುಣಾ ಕ್ಷೇತ್ರದ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸಮರ್ಥರು ಎಂಬುದು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…