ಹವಾಮಾನ ವರದಿ | 19-08-2025 | ಆ.20 ರ ನಂತರ “ಮಳೆ ಸಾಕಪ್ಪ…” ಎನ್ನುವವರು ಗಮನಿಸಿ..!

August 19, 2025
2:01 PM
ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

20.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…… ಮುಂದೆ ಓದಿ……

ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21 ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.  ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror