ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಸ್ವದೇಶದಲ್ಲಿಯೇ ಜಗತ್ತಿನ ಶೇಕಡ 30 ರಷ್ಟು ಮೊಬೈಲ್‌ಗಳು ತಯಾರಾಗುತ್ತಿವೆ. ಐಐಟಿ, ಐಐಐಟಿ ಸಂಸ್ಥೆಗಳಿಂದ ಹೆಚ್ಚಿನ ಜ್ಞಾನ ದೊರೆಯುತ್ತಿದ್ದು, ದೇಶದ ಆರ್ಥಿಕತೆ ಬೆಳೆಯುತ್ತಿದೆ ಎಂದು ತಿಳಿಸಿದರು. ಭಾರತ ದೇಶ ಅತಿಹೆಚ್ಚು ಯುವಕರನ್ನು ಹೊಂದಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದೆ. ಜಿಲ್ಲೆಯಲ್ಲಿ 400 ಶಾಲೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…