ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

February 11, 2026
7:11 AM
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ. ಉತ್ತಮ ಮಾರುಕಟ್ಟೆ ದರದಿಂದ ರೈತರು ಲಾಭ ಗಳಿಸುತ್ತಿದ್ದು, 219 ಕೋಟಿ ರೂ. ವಹಿವಾಟು ನಡೆದಿದೆ.

ರೇಷ್ಮೆ ಗೂಡಿಗೆ ಉತ್ತಮ ಬೆಲೆ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ರೇಷ್ಮೆ ಬೆಳೆಯಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಪ್ರೋತ್ಸಾಹದಿಂದ ಜಿಲ್ಲೆಯಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ಸಿಕ್ಕಿದೆ.

ರೈತರು ತಮ್ಮ ರೇಷ್ಮೆ ಗೂಡುಗಳನ್ನು ಕೊಳ್ಳೇಗಾಲದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಹಾಗೂ ಸಂತೆ ಮರಹಳ್ಳಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಕೆಜಿಗೆ 750ರಿಂದ 800 ರೂಪಾಯಿವರೆಗೆ ಮಾರಾಟವಾಗುತ್ತಿದೆ ಎಂದು ದೂರದರ್ಶನ ವರದಿ ಮಾಡಿದೆ.

ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಹಿಮ ಬೀಳುತ್ತಿರುವುದರಿಂದ ಇಳುವರಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿದಿದೆ. ಆದರೂ ಉತ್ತಮ ದರ ಲಭ್ಯವಾಗುತ್ತಿರುವುದರಿಂದ ರೈತರಿಗೆ ಆದಾಯದಲ್ಲಿ ಏರಿಕೆ ಕಂಡುಬರುತ್ತಿದೆ.

ರೈತ ಮಹದೇವಸ್ವಾಮಿ ಮಾತನಾಡಿ, ಪಾರಂಪರಿಕವಾಗಿ ರೇಷ್ಮೆ ಬೆಳೆಯುತ್ತಿದ್ದು, ಪ್ರತಿ ಬೆಳೆಗೆ 80ರಿಂದ 90 ಸಾವಿರ ರೂಪಾಯಿ ಆದಾಯ ಗಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೋರ್ವ ರೈತ ನಾಗೇಶ್ ಮಾತನಾಡಿ, ರೇಷ್ಮೆ ಬೆಳೆಯು ಬೇರೆ ಬೆಳೆಗಳಿಗಿಂತ ಲಾಭದಾಯಕವಾಗಿದ್ದು, ಎಲ್ಲಾ ಖರ್ಚುಗಳನ್ನು ಕಡಿತ ಮಾಡಿದ ಬಳಿಕ ಶೇಕಡಾ 70ರಷ್ಟು ಉಳಿತಾಯ ಸಾಧ್ಯವಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೇಷ್ಮೆ ಇಲಾಖೆ ಉಪನಿರ್ದೇಶಕ ರಾಚಪ್ಪಾಜಿ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ರೇಷ್ಮೆ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ 219 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror