ರೇಷ್ಮೆ ಗೂಡಿಗೆ ಉತ್ತಮ ಬೆಲೆ ಲಭಿಸುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ರೇಷ್ಮೆ ಬೆಳೆಯಲು ಹೆಚ್ಚಿನ ಉತ್ಸಾಹ ತೋರುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುತ್ತಿರುವ ಸೌಲಭ್ಯಗಳು ಹಾಗೂ ಪ್ರೋತ್ಸಾಹದಿಂದ ಜಿಲ್ಲೆಯಲ್ಲಿ ರೇಷ್ಮೆ ಕೃಷಿಗೆ ಉತ್ತೇಜನ ಸಿಕ್ಕಿದೆ.
ರೈತರು ತಮ್ಮ ರೇಷ್ಮೆ ಗೂಡುಗಳನ್ನು ಕೊಳ್ಳೇಗಾಲದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಹಾಗೂ ಸಂತೆ ಮರಹಳ್ಳಿ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ರೇಷ್ಮೆ ಗೂಡು ಕೆಜಿಗೆ 750ರಿಂದ 800 ರೂಪಾಯಿವರೆಗೆ ಮಾರಾಟವಾಗುತ್ತಿದೆ ಎಂದು ದೂರದರ್ಶನ ವರದಿ ಮಾಡಿದೆ.
ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಹಿಮ ಬೀಳುತ್ತಿರುವುದರಿಂದ ಇಳುವರಿ ಪ್ರಮಾಣ ಸ್ವಲ್ಪ ಮಟ್ಟಿಗೆ ಕುಸಿದಿದೆ. ಆದರೂ ಉತ್ತಮ ದರ ಲಭ್ಯವಾಗುತ್ತಿರುವುದರಿಂದ ರೈತರಿಗೆ ಆದಾಯದಲ್ಲಿ ಏರಿಕೆ ಕಂಡುಬರುತ್ತಿದೆ.
ರೈತ ಮಹದೇವಸ್ವಾಮಿ ಮಾತನಾಡಿ, ಪಾರಂಪರಿಕವಾಗಿ ರೇಷ್ಮೆ ಬೆಳೆಯುತ್ತಿದ್ದು, ಪ್ರತಿ ಬೆಳೆಗೆ 80ರಿಂದ 90 ಸಾವಿರ ರೂಪಾಯಿ ಆದಾಯ ಗಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಮತ್ತೋರ್ವ ರೈತ ನಾಗೇಶ್ ಮಾತನಾಡಿ, ರೇಷ್ಮೆ ಬೆಳೆಯು ಬೇರೆ ಬೆಳೆಗಳಿಗಿಂತ ಲಾಭದಾಯಕವಾಗಿದ್ದು, ಎಲ್ಲಾ ಖರ್ಚುಗಳನ್ನು ಕಡಿತ ಮಾಡಿದ ಬಳಿಕ ಶೇಕಡಾ 70ರಷ್ಟು ಉಳಿತಾಯ ಸಾಧ್ಯವಾಗುತ್ತದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೇಷ್ಮೆ ಇಲಾಖೆ ಉಪನಿರ್ದೇಶಕ ರಾಚಪ್ಪಾಜಿ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ರೇಷ್ಮೆ ಕೃಷಿಯನ್ನು ಅವಲಂಬಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ 219 ಕೋಟಿ ರೂಪಾಯಿ ವಹಿವಾಟು ನಡೆದಿದೆ ಎಂದು ತಿಳಿಸಿದರು.
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…