ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸಿದೆ. ಭಾರತ ಎರಡನೇ ಅತಿದೊಡ್ಡ ರೇಷ್ಮೆ ಉತ್ಪಾದಕ ದೇಶವಾಗಿದೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ತಾಂತ್ರಿಕ ನಿರ್ದೇಶಕ ಮಂಥಿರಾ ಮೂರ್ತಿ ಹೇಳಿದರು.
ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರಿನಲ್ಲಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ನಡೆದ ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಸದಸ್ಯ ಕಾರ್ಯದರ್ಶಿ ಮಾತನಾಡಿ ಮಂಡಳಿಯು ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ತನ್ನದೇ ಆದ ತಾಂತ್ರಿಕ ನೈಪುಣ್ಯತೆ ಹೊಂದಿದ್ದು, ವಿವಿಧ ರೀತಿಯ ಸಂಶೋಧನೆಗಳನ್ನು ನಡೆಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ರೇಷ್ಮೆ ಕೃಷಿಯನ್ನು ಮತ್ತೊಂದು ಹಂತಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಸಂಶೋಧಕ ಅರುಣ್, ಹಿಪ್ಪು ನೇರಳೆಗೆ ಮಣ್ಣಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮಂಡಳಿಯಿಂದ ‘ಮಿಸ್ಟರ್ ಪ್ರೊ’ ಎಂಬ ದ್ರಾವಣವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಹಿಪ್ಪನೇರಳೆ ಗಿಡಕ್ಕೆ ಬರುವ ರೋಗಗಳು ನಿವಾರಣೆಯಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳು ಹಾಗೂ ರೇಷ್ಮೆ ಕೃಷಿಕರು ಭಾಗವಹಿಸಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…