ರಾಜ್ಯಾದ್ಯಂತ ಇಂದು ಏಕಕಾಲಕ್ಕೆ ಜಿಲ್ಲಾ ಮಟ್ಟದ ‘ಜನತಾ ದರ್ಶನ’ ನಡೆಸಲು ಸರ್ಕಾರt ನಿರ್ಧರಿಸಿದೆ. ಸಾರ್ವಜನಿಕರ ದಿನನಿತ್ಯದ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಒದಗಿಸುವುದು ಇದರ ಉದ್ದೇಶ. ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಧ್ಯೇಯವನ್ನು ಹಾಕಿಕೊಳ್ಳಲಾಗಿದೆ. ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು.
ಇಡಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.
ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ. ಹೀಗೆ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.
ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು. ಈ ಸೂಚನೆಯ ಫಲವೇ ಇಂದು ರಾಜ್ಯದಾದ್ಯಂತ ಏಕ ಕಾಲಕ್ಕೆ ನಡೆಯಲಿರುವ ಜನತಾ ದರ್ಶನ ಕಾರ್ಯಕ್ರಮ. ಇದು ನಿಗದಿತವಾಗಿ ನಡೆಯಲಿದೆ.
ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.
– ಅಂತರ್ಜಾಲ ಮಾಹಿತಿ
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…
ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…
ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…