ಬೆಂಗಳೂರು ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ (Plastic) ಬಳಸುವ ಗ್ರಾಹಕರಿಗೆ ಬಿಬಿಎಂಪಿ ಇನ್ನು ಮುಂದೆ ದಂಡ ವಿಧಿಸಲಿದೆ.ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ ಸಿಕ್ಕಿ ಬಿದ್ದದವರಿಗೆ ಬೀಳಲಿದೆ ದಂಡ ಪ್ರಯೋಗಿಸಲು ಬಿಬಿಎಂಪಿ (BBMP) ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ.ಆದರೆ ವ್ಯಾಪಾರಿಗಳು, ಗ್ರಾಹಕರು ಪ್ಲಾಸ್ಟಿಕ್ ಮೇಲೆ ಅವಲಂಬಿತರಾಗಿದ್ದಾರೆ. ಇದನ್ನು ತಪ್ಪಿಸಲು ವ್ಯಾಪಾರಿಗಳು, ಗ್ರಾಹಕರು ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ಪ್ಲಾಸ್ಟಿಕ್ ಕೈ ಚೀಲವನ್ನು ಬಳಸಿದ್ದು ಕಂಡು ಬಂದರೆ ಗ್ರಾಹಕರಿಗೆ 200 ರೂ. ದಂಡ ವಿಧಿಸಲಿದೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮದಡಿ ಮಾಲಿನ್ಯ ನಿಯಂತ್ರಣ ಮಂಡಳಿ ದಂಡದ ಪ್ರಮಾಣ ಕುರಿತು ಆದೇಶ ಹೊರಡಿಸಿದೆ.
ಬೆಂಗಳೂರು ನಗರದಲ್ಲಿ ವ್ಯಾಪಾರಿಗಳಿಂದ ಗ್ರಾಹಕರು ಖರೀದಿಸುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್ ಬಂಟಿಂಗ್ಸ್, ಫ್ಲೆಕ್ಸ್, ಪ್ಲಾಸ್ಟಿಕ್ ಕಪ್, ಸ್ಪೂನ್, ಡೈನಿಂಗ್ ಟೇಬಲ್ ಮೇಲೆ ಹಾಕುವ ಪ್ಲಾಸ್ಟಿಕ್ ಹಾಳೆ ಕಂಡು ಬಂದಲ್ಲಿ ಕೂಡಲೇ ದಂಡ ಪ್ರಯೋಗಕ್ಕೆ ಮಾರ್ಷಲ್ಸ್ ಸಜ್ಜಾಗಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…