ಜಗತ್ತು(world) ಎಷ್ಟೇ ಮುಂದುವರೆದರೂ ಕೆಲ ಜನ ಮಾತ್ರ ಬದಲಾಗಲ್ಲ. ಗಂಡಿನಷ್ಟೇ ಹೆಣ್ಣು ಕೂಡ ಪ್ರತೀ ಮಜಲಲ್ಲೂ ಸಮರ್ಥಳಾಗಿರುವಾಗ ಮತ್ತೆ ಯಾಕೆ ಹೆಣ್ಣು ಗಂಡು ಎಂಬ ಭೇದ-ಭಾವ ಮಾಡುತ್ತಾರೋ ಗೊತ್ತಿಲ್ಲ. ಜಗತ್ತಿನಲ್ಲಿ ಎಂಥೆಂತಾ ಪಾಪಿಗಳು ಇರುತ್ತಾರೆ ಎಂದರೆ ಅಂಥವರು ಈ ಭೂಮಿ ಮೇಲೆ ಒಂದು ನಿಮಿಷ ಬದುಕಲು ಅನರ್ಹರು. ಇಲ್ಲೊಂದು ತಂಡ ಹೆಣ್ಣು ಅಂತ ಗೊತ್ತಾದ್ರೆ ಭ್ರೂಣ ಹತ್ಯೆ(Foeticide) ಮಾಡ್ತಿದ್ರಂತೆ. ಯಾವ ವಿಜ್ಞಾನ(Science) ಬಂದ್ರು ಕೆಲ ಜನ ಬದಲಾಗಲ್ಲ ಅನ್ನೋದು ಇದಕ್ಕೆ.
ಮಂಡ್ಯದ (Mandya) ಆಲೆಮನೆಯಲ್ಲಿ (Alemane) ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B.Dayanand) ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ತನಿಖೆ ಮುಂದುವರಿಸಿದ್ದೇವೆ. ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದರು.
ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.
In connection with the case of fetus killing in Alemane, Mandya, it was discovered that the fetus was being found and killed. Bengaluru City Police Commissioner B. Dayanand has stated that 242 fetuses were killed in three months. Speaking at a press conference, he said that the police have discovered a network of killing female foetuses.
– ಅಂತರ್ಜಾಲ ಮಾಹಿತಿ
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…