Advertisement
MIRROR FOCUS

ಇವರನ್ನು ಬಿಸಿ ಬಿಸಿ ಎಣ್ಣೆಯಲ್ಲಿ ಕರಿದರಷ್ಟೇ ಸಾವಿರ ಸಾವಿರ ಹೆಣ್ಣು ಭ್ರೂಣಗಳಿಗೆ ಸಮಾಧಾನ | ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ ಪಾಪಿಗಳು |

Share

ಜಗತ್ತು(world) ಎಷ್ಟೇ ಮುಂದುವರೆದರೂ ಕೆಲ ಜನ ಮಾತ್ರ ಬದಲಾಗಲ್ಲ. ಗಂಡಿನಷ್ಟೇ ಹೆಣ್ಣು ಕೂಡ ಪ್ರತೀ ಮಜಲಲ್ಲೂ ಸಮರ್ಥಳಾಗಿರುವಾಗ ಮತ್ತೆ ಯಾಕೆ ಹೆಣ್ಣು ಗಂಡು ಎಂಬ ಭೇದ-ಭಾವ ಮಾಡುತ್ತಾರೋ ಗೊತ್ತಿಲ್ಲ. ಜಗತ್ತಿನಲ್ಲಿ ಎಂಥೆಂತಾ ಪಾಪಿಗಳು ಇರುತ್ತಾರೆ ಎಂದರೆ ಅಂಥವರು ಈ ಭೂಮಿ ಮೇಲೆ ಒಂದು ನಿಮಿಷ ಬದುಕಲು ಅನರ್ಹರು. ಇಲ್ಲೊಂದು ತಂಡ ಹೆಣ್ಣು ಅಂತ ಗೊತ್ತಾದ್ರೆ ಭ್ರೂಣ ಹತ್ಯೆ(Foeticide) ಮಾಡ್ತಿದ್ರಂತೆ. ಯಾವ ವಿಜ್ಞಾನ(Science) ಬಂದ್ರು ಕೆಲ ಜನ ಬದಲಾಗಲ್ಲ ಅನ್ನೋದು ಇದಕ್ಕೆ.

ಮಂಡ್ಯದ (Mandya) ಆಲೆಮನೆಯಲ್ಲಿ (Alemane) ಭ್ರೂಣ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B.Dayanand) ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ತನಿಖೆ ಮುಂದುವರಿಸಿದ್ದೇವೆ. ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದರು.

ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು.

In connection with the case of fetus killing in Alemane, Mandya, it was discovered that the fetus was being found and killed. Bengaluru City Police Commissioner B. Dayanand has stated that 242 fetuses were killed in three months. Speaking at a press conference, he said that the police have discovered a network of killing female foetuses.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

13 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

14 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

14 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

18 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago