ಭಾರತದಲ್ಲಿ ಸಹೋದರ, ಸಹೋದರಿ ಸಂಬಂಧದ ದ್ಯೋತಕವಾಗಿ ರಕ್ಷಾ ಬಂಧನ #RakshaBandhan ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಪ್ರಧಾನಿಗಳು ಈ ಹಬ್ಬಕ್ಕೆ ವಿಶೇಷ ಸ್ಥಾನ ಮಾನವನ್ನು ನೀಡಿದ್ದಾರೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಪಾಕಿಸ್ತಾನಿ ಸಹೋದರಿ ಖಮರ್ ಜಹಾನ್ ರಕ್ಷಾ ಬಂಧನ ಹಿನ್ನೆಲೆ ದೆಹಲಿ ತಲುಪಿದ್ದಾರೆ.
ಪಾಕಿಸ್ತಾನದಿಂದ ಬಂದು ಅಹಮದಾಬಾದ್‌ನಲ್ಲಿ ನೆಲೆಸಿರುವ ಕಮರ್ ಜಹಾನ್ ಅವರು ಕಳೆದ ಹಲವು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದಾರೆ. ಕಳೆದ 3 ವರ್ಷಗಳ ನಂತರ ರಾಖಿ ಕಟ್ಟಲು ದೆಹಲಿಗೆ ಬಂದಿದ್ದೇನೆ ಮತ್ತು ಪ್ರಧಾನಿ ಮೋದಿಗೆ ತನ್ನ ಕೈಯಿಂದಲೇ ರಾಖಿ ಕಟ್ಟಿದ್ದೇನೆ ಎಂದು ಕಮರ್ ಜಹಾನ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಮೋದಿ ವಿಶ್ವಗುರುವಾಗಿ ಹೊರಹೊಮ್ಮಿದ್ದಾರೆ. ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಮತ್ತು 2024 ರಲ್ಲಿ ಅವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲಿ ಎಂದು ಹಾರೈಸುತ್ತೇನೆ ಎಂದು ಖಮರ್ ಹೇಳಿದ್ದಾರೆ.
ಖಮರ್ ಜಹಾನ್ ಕರಾಚಿಯಿಂದ ತನ್ನ ತಾಯಿಯೊಂದಿಗೆ ತನ್ನ ಸಂಬಂಧಿಕರನ್ನು ಭೇಟಿ ಮಾಡಲು ಭಾರತಕ್ಕೆ ಬಂದಿದ್ದರು. ಮತ್ತು ನಂತರ ಇಲ್ಲಿಯೇ ಮದುವೆಯಾಗಿ ವೈವಾಹಿಕ ಜೀವನ ಆರಂಭಿಸಿದ್ದಾರೆ. ನಾನು ಪಾಕಿಸ್ತಾನದಲ್ಲಿಲ್ಲ ಆದರೆ ಭಾರತದಲ್ಲಿರುವುದು ನನ್ನ ಅದೃಷ್ಟ ಎಂದು ನಾನು ಭಾವಿಸುತ್ತೇನೆ, ಇಲ್ಲಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎನ್ನುತ್ತಾರೆ ಅವರು.
Source: ANI