ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.
ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.