Advertisement
MIRROR FOCUS

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

Share

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಪ್ರಕಟವಾಗುತ್ತಿರುವ ಮಳೆ ಮುನ್ಸೂಚನೆಗಳು ವಾಸ್ತವ ಪರಿಸ್ಥಿತಿಗೆ ಹೊಂದಿಕೆಯಾಗದೆ, ಅದರ ಆಧಾರದ ಮೇಲೆ ಜಿಲ್ಲಾಡಳಿತಗಳು ನಿರಂತರವಾಗಿ ರಜೆ ಘೋಷಿಸುತ್ತಿರುವುದು ಶೈಕ್ಷಣಿಕ ವಲಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಕಳವಳ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಾಗಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಳೆಯ ತೀವ್ರತೆ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮದ ಹೆಸರಿನಲ್ಲಿ ಪದೇ ಪದೇ ರಜೆ ಘೋಷಿಸುವುದು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.

ವಿಶೇಷವಾಗಿ ವಸತಿ ಶಾಲೆಗಳಿಗೂ ರಜೆ ಅನ್ವಯವಾಗುವಂತೆ ಆದೇಶ ಹೊರಡಿಸಲಾಗುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸ ಎಂಬ ಪ್ರಶ್ನೆಯನ್ನು ಅವರು ಎತ್ತಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಇಲಾಖೆಯು ಸ್ಥಳೀಯ ವಾಸ್ತವ ಪರಿಸ್ಥಿತಿಯನ್ನು ಸಮರ್ಪಕವಾಗಿ ಪರಿಗಣಿಸದೆ ಅವೈಜ್ಞಾನಿಕ ವರದಿಗಳನ್ನು ನೀಡುತ್ತಿರುವುದರಿಂದ, ಮಳೆಯೇ ಇಲ್ಲದ ಸಂದರ್ಭದಲ್ಲಿಯೂ ಜಿಲ್ಲಾಡಳಿತಗಳು ರಜೆ ಘೋಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು.

ಹವಾಮಾನ ಮುನ್ಸೂಚನೆಗಳನ್ನು ಇನ್ನಷ್ಟು ನಿಖರ ಹಾಗೂ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ನೀಡುವಂತೆ ಸಂಬಂಧಿಸಿದ ಇಲಾಖೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಶಿಕ್ಷಣದ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡುವಾಗ ವಾಸ್ತವ ಪರಿಸ್ಥಿತಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಬೇಕು ಎಂದು ಭೋಜೆಗೌಡ ಒತ್ತಾಯಿಸಿದರು.

MLC S.L. Bhojegowda has expressed concern that inaccurate rainfall forecasts are affecting the education sector in Dakshina Kannada and Udupi. He said repeated holiday declarations based on forecasts, even when there is little or no rain, are disrupting academic activities and urged authorities to rely on more accurate, location-specific weather assessments.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

6 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

15 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

15 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

16 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago