ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ, ಬೆಂಗಳೂರು ಕೆಪೆಕ್ ಸಂಸ್ಥೆ ಅವರ ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳು ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಕೆ. ಆನಂದ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಆನಂದ , ವಿಜಯಪುರ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕಿರು ಆಹಾರ ಸಂಸ್ಕರಾಣ ಉದ್ದಿಮೆಗಳ ಮಾಹಿತಿ ನೀಡಲು ಆಯ್ಕೆ ಮಾಡಿಕೊಂಡಿರುವುದು ಸಂತಸವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಸ್ವಸಹಾಯ ಗುಂಪಿನ ಮಹಿಳೆಯರು ಇದರಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ವಿಜಯಪುರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಎಸ್ ಪಾಟೀಲ ಮಾತನಾಡಿ, ಒಂದು ದಿನದ ಕಾರ್ಯಾಗಾರದಲ್ಲಿ ರೈತರಿಗೆ ಕೇಂದ್ರದ ಯೋಜನೆಗಳ ಕುರಿತು ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಫಲಾನುಭವಿ ಮಹಾದೇವಿ, ಆರ್ಥಿಕವಾಗಿ ಸಬಲರಾಗಲು ಕಾರ್ಯಾಗಾರ ಉತ್ತಮವಾದ ಮಾರ್ಗದರ್ಶನ ನೀಡಿದೆ ಎಂದರು. ಮತ್ತೋರ್ವ ಶಿಬಿರಾರ್ಥಿ ಮಹಾದೇವ ಶಿವಶಂಕರಪ್ಪ ಅಂಬಲಿ, ಕಾರ್ಯಾಗಾರದಲ್ಲಿ ಯೋಜನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದು, ಪ್ರತಿಯೊಬ್ಬರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಿದೆ ಎಂದು ಹೇಳಿದರು .
ಬೆಂಗಳೂರು ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿ. ಎನ್ . ಶಿವಪ್ರಕಾಶ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.


