Advertisement
MIRROR FOCUS

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸದುಪಯೋಗ ಪಡಿಸಿಕೊಳ್ಳಲು  ಮಹಿಳೆಯರಿಗೆ ಕರೆ

Share

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ,  ಬೆಂಗಳೂರು  ಕೆಪೆಕ್ ಸಂಸ್ಥೆ  ಅವರ  ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳು ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಕೆ.  ಆನಂದ  ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಆನಂದ , ವಿಜಯಪುರ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕಿರು ಆಹಾರ ಸಂಸ್ಕರಾಣ ಉದ್ದಿಮೆಗಳ ಮಾಹಿತಿ ನೀಡಲು ಆಯ್ಕೆ ಮಾಡಿಕೊಂಡಿರುವುದು ಸಂತಸವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಸ್ವಸಹಾಯ ಗುಂಪಿನ ಮಹಿಳೆಯರು ಇದರಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ವಿಜಯಪುರ ಕೃಷಿ ಇಲಾಖೆ ಜಂಟಿ  ನಿರ್ದೇಶಕ ಶಿವನಗೌಡ ಎಸ್ ಪಾಟೀಲ ಮಾತನಾಡಿ,  ಒಂದು ದಿನದ  ಕಾರ್ಯಾಗಾರದಲ್ಲಿ ರೈತರಿಗೆ  ಕೇಂದ್ರದ ಯೋಜನೆಗಳ  ಕುರಿತು ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಫಲಾನುಭವಿ ಮಹಾದೇವಿ, ಆರ್ಥಿಕವಾಗಿ  ಸಬಲರಾಗಲು ಕಾರ್ಯಾಗಾರ ಉತ್ತಮವಾದ ಮಾರ್ಗದರ್ಶನ ನೀಡಿದೆ ಎಂದರು. ಮತ್ತೋರ್ವ ಶಿಬಿರಾರ್ಥಿ ಮಹಾದೇವ ಶಿವಶಂಕರಪ್ಪ ಅಂಬಲಿ,  ಕಾರ್ಯಾಗಾರದಲ್ಲಿ   ಯೋಜನೆಯ ಬಗ್ಗೆ  ಮಾಹಿತಿಯನ್ನು ಪಡೆದುಕೊಂಡಿದ್ದು,   ಪ್ರತಿಯೊಬ್ಬರು  ಸ್ವಾವಲಂಬಿ ಜೀವನ ನಡೆಸಲು  ಅನುಕೂಲವಾಗಿದೆ ಎಂದು ಹೇಳಿದರು .

ಬೆಂಗಳೂರು  ಕೆಪೆಕ್ ಸಂಸ್ಥೆಯ  ವ್ಯವಸ್ಥಾಪಕ  ನಿರ್ದೇಶಕ ಸಿ. ಎನ್ . ಶಿವಪ್ರಕಾಶ ಸೇರಿದಂತೆ  ಹಿರಿಯ ಅಧಿಕಾರಿಗಳು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

55 minutes ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

17 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago