Advertisement
ಸುದ್ದಿಗಳು

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

Share

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜುಗಳ ಸುತ್ತಮುತ್ತ ಧೂಮಪಾನ ಮತ್ತು ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಕೇಂದ್ರ ಸಮಿತಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸನಿಹದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಸಿಗರೇಟ್, ತಂಬಾಕು ಸೇರಿದಂತೆ ಯಾವುದೇ ಧೂಮಪಾನ ವಸ್ತುಗಳ ಮಾರಾಟ ಕಂಡುಬಂದರೆ ಅವರ ಲೈಸನ್ಸ್ ರದ್ದುಗೊಳಿಸುವಂತೆ ಸೂಚಿಸಿದರು.

ಶಾಲಾ ಪರಿಸರದಲ್ಲಿ ಧೂಮಪಾನ ಮತ್ತು ಮಾದಕ ವಸ್ತುಗಳ ಚಟುವಟಿಕೆಗಳು ನಡೆಯದಂತೆ ಎಲ್ಲಾ ಶಾಲಾ ಎಸ್‌ಡಿಎಂಸಿಗಳು ಪರಿಶೀಲನೆ ನಡೆಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ವರದಿ ಪಡೆಯಬೇಕೆಂದು ಅವರು ತಿಳಿಸಿದರು.

ಶಾಲಾ–ಕಾಲೇಜುಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವಂತೆ ಸೂಚನೆ ನೀಡಲಾಗಿದೆ. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಜನರಲ್ಲಿ ಡ್ರಗ್ಸ್ ಮುಕ್ತ ಅಭಿಯಾನವನ್ನು ಬಲಪಡಿಸಬೇಕು ಎಂದು ಹೇಳಿದರು.

ಹೋಂಸ್ಟೇ ಮತ್ತು ಲಾಡ್ಜ್‌ಗಳಲ್ಲಿ ಆಗ್ಗಿಂದಾಗೆ ತಪಾಸಣೆ ನಡೆಸುವುದು, ಕರಾವಳಿ ಭದ್ರತಾ ಪೊಲೀಸರು ಬೋಟ್‌ಗಳನ್ನು ಅನಿರೀಕ್ಷಿತವಾಗಿ ಪರಿಶೀಲಿಸುವುದು, ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಪಾರ್ಸೆಲ್‌ಗಳ ಮೇಲೆ ನಿಗಾವಹಿಸುವಂತೆ ಸೂಚಿಸಲಾಗಿದೆ.

ಇದಲ್ಲದೆ ಕೈಗಾರಿಕಾ ಘಟಕಗಳು, ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ವಿರುದ್ಧ ನಿಗಾವಹಿಸಲು ಸೂಚಿಸಲಾಗಿದೆ.

ಡ್ರಗ್ಸ್ ಮತ್ತು ಇತರೆ ಮಾದಕ ವಸ್ತುಗಳ ಚಟಕ್ಕೆ ಒಳಗಾದ ಮಕ್ಕಳನ್ನು ಹೊರತೆಗೆಯಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ವಿಶೇಷ ಕೌನ್ಸಿಲಿಂಗ್ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಇಲ್ಲಿ ಕರೆತಂದು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ ಮಿಥುನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Authorities in Mangalore have issued strict instructions to cancel licenses of shops selling cigarettes, tobacco, or drugs near schools and colleges. Increased inspections and awareness campaigns are being implemented to ensure student safety and curb substance abuse.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago