ಪಿಲಿಕುಳದಲ್ಲಿ ಇರುವೆ ಕಾಟದಿಂದ ಒದ್ದಾಡಿದ ಹಾವು ವಿಡಿಯೋ ವೈರಲ್ | ಪಿಲಿಕುಳ ಜೈವಿಕ ಉದ್ಯಾನದ ಹಾವು ಸುರಕ್ಷಿತ | ಅಧಿಕಾರಿಗಳಿಂದ ಸ್ಪಷ್ಟನೆ |

October 8, 2022
11:42 AM

ಮಂಗಳೂರು ಪಿಲಿಕುಳ ಜೈವಿಕ ಉದ್ಯಾನದೊಳಗಿರುವ ಹಾವಿನ ಗೂಡೊಂದರಲ್ಲಿ ಇರುವೆಗಳ ಗುಂಪು ಹಾವನ್ನು ಕಚ್ಚುತ್ತಿರುವ ವೀಡಿಯೋ ಕೆಲವು ಸಾಮಾಜಿಕ ಜಾಲತಾಣಗಳಲ್ಲಿ ಎರಡು ದಿನಗಳಿಂದ ಹರಿದಾಡಿತು. ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯ ಹಾವು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

Advertisement

ವಿಡಿಯೋ ವೈರಲ್‌ ಅಗಿರುವ ವಿಷಯ ತಿಳಿದ ಕೂಡಲೇ ಪ್ರಾಧಿಕಾರದ ಆಯುಕ್ತರು ಸಂಬಂಧಪಟ್ಟ ಹಿರಿಯ ವೈಜ್ಞಾನಿಕ ಅಧಿಕಾರಿ, ಪಶುಪಾಲನಾ ವೈದ್ಯಾಧಿಕಾರಿ ಮತ್ತು ಬಯಾಲಾಜಿಸ್ಟ್ ಜೊತೆಗೂಡಿ ಸ್ಥಳಪರಿಶೀಲನೆ ನಡೆಸಿರುತ್ತಾರೆ. ಪರಿಶೀಲನೆ ವೇಳೆ ಇರುವೆಗಳ ಬಾದೆಗೆ ಒಳಗಾದ ಉರಗದ ಆರೋಗ್ಯವು ಸ್ಥಿರವಾಗಿದೆ ಎಂಬುದಾಗಿ ಪಶುಪಾಲನಾ ವೈದ್ಯಾಧಿಕಾರಿಯವರು ದೃಢೀಕರಿಸಿರುತ್ತಾರೆ. ಪ್ರಾಧಿಕಾರ ಆಯುಕ್ತರ ನಿರ್ದೇಶನದಂತೆ ಜೈವಿಕ ಉದ್ಯಾನವನದ ನಿರ್ದೇಶಕರು ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಲುವಾಗಿ ಉರಗ ಪಾಲಕರಿಗೆ ನೋಟೀಸು ನೀಡಿ ವಿವರಣೆ ನೀಡಲು ತಿಳಿಸಿರುತ್ತಾರೆ.

ಇಂತಹ ಘಟನೆಯು ಪುನಃ ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಕೂಡಲೇ ಪ್ರಾಧಿಕಾರದ ಆಯುಕ್ತರ ನೇತೃತ್ವದಲ್ಲಿ ಜೈವಿಕ ಉದ್ಯಾನವನದ ನಿರ್ದೇಶಕರು, ಹಿರಿಯ ವೈಜ್ಞಾನಿಕ ಅಧಿಕಾರಿ ಮತ್ತು ಪಶುಪಾಲನಾ ವೈದ್ಯಾಧಿಕಾರಿಯವರನ್ನು ಒಳಗೊಂಡು ವಿಶೇಷ ಸಭೆಯನ್ನು ನಡೆಸಲಾಗಿದೆ, ಅಂತೆಯೇ ಈ ಸಭೆಯಲ್ಲಿ ಇರುವೆಗಳ ಬಾಧೆಗೊಳಗಾದ ಆ ಉರಗದ ಆರೋಗ್ಯವನ್ನು ಪ್ರತೀ 2 ಗಂಟೆಗಳಿಗೊಮ್ಮೆ ಪರಿಶೀಲನೆ ನಡೆಸಿ ವರದಿಯನ್ನು ಆಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಅಲ್ಲದೇ ಜೈವಿಕ ಉದ್ಯಾನದಲ್ಲಿ ಬೇರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನದ ಎಲ್ಲಾ ಅವಧಿಯಲ್ಲಿ ಉರಗ ವಿಭಾಗಕ್ಕೆ ಹೆಚ್ಚುವರಿ ಸಿಸಿ ಕ್ಯಾಮರಾವನ್ನು ಅಳವಡಿಸಿ 24*7 ಕಣ್ಗಾವಲು ಮಾಡಲು ಕ್ರಮಕೈಗೊಳ್ಳಲಾಗುವುದು. ಉರಗಗಳ ಆವರಣದ ಒಳಗೆ ಯಾವುದೇ ತಿಂಡಿ ತಿನಸುಗಳನ್ನು ಕೊಂಡೋಗದಂತೆ ನೋಡಿಕೊಂಡು ನಿಗಾವಹಿಸಲು ಭದ್ರತಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಉರಗ ಆವರಣದ ಹೊರಭಾಗದ ಸ್ವಚ್ಛತೆಯನ್ನು ಆಗಾಗ ಮಾಡಲು ಹಾಗೂ ಇದರ ಮೇಲುಸ್ತುವಾರಿಯನ್ನು ಭದ್ರತಾಧಿಕಾರಿಯವರು ನೋಡಿಕೊಂಡು ವರದಿ ನೀಡಲು ಸೂಚಿಸಲಾಗಿದೆ.

ಇದಲ್ಲದೆ ಜೈವಿಕ ಉದ್ಯಾನದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬರುವಲ್ಲಿ ತಿಂಡಿ ತಿನಿಸುಗಳ ಪ್ಯಾಕೇಟುಗಳು ಪ್ಲಾಸ್ಟಿಕ್ ಬಾಟಲಿ ಇನ್ನಿತರ ಸಾಮಾಗ್ರಿಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಹಾಗೂ ಪ್ರಾಣಿಗಳ ಆವರಣಗಳಿಗೆ ಹಾನಿ ಉಂಟು ಮಾಡದಂತೆ, ಸಂದರ್ಶಕರಿಗೆ ಅರಿವು ಮೂಡಿಸಲು ಹೆಚ್ಚುವರಿ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ
July 7, 2025
9:17 PM
by: The Rural Mirror ಸುದ್ದಿಜಾಲ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ
July 7, 2025
8:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group