ಹಾವು ಹಿಡಿದು ಮುತ್ತಿಡಲು ಹೋಗಿ ವ್ಯಕ್ತಿಯೊಬ್ಬ ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಭದ್ರಾವತಿಯ ಅಲೆಕ್ಸ್ ಎಂಬಾತ ನಾಗರ ಹಾವನ್ನು ಹಿಡಿದು ಮುತ್ತಿಡುವಾಗ ಹಾವು ಆತನ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬವರು ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಸಂರಕ್ಷಣೆ ಮಾಡುತ್ತಿದ್ದರು. ಮೊನ್ನೆ ಭದ್ರಾವತಿಯ ಬೊಮ್ಮನಕಟ್ಟೆಯ ಮದುವೆ ಮನೆಯಲ್ಲಿ ಒಟ್ಟಿಗೆ ಎರಡು ನಾಗರ ಹಾವು ಕಾಣಿಸಿಕೊಂಡಿದೆ. ಈ ಎರಡು ಹಾವುಗಳನ್ನು ಹಿಡಿದಿದ್ದು, ಈ ವೇಳೆ ಒಂದು ಹಾವಿಗೆ ಗಾಯವಾಗಿದೆ. ಈ ವೇಳೆ ಒಂದು ಹಾವಿಗೆ ಮುತ್ತಿಕ್ಕಲು ಹೋದಾಗ ಹಾವು ತಿರುಗಿ ಕಚ್ಚಿದೆ.
ಹಾವು ಕಚ್ಚಿದರೂ ಇವರು ಹಾವುಗಳನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ನಂತರ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಸದ್ಯ ಚಿಕಿತ್ಸೆ ಪಡೆದು ಅಲೆಕ್ಸ್ ಮನೆಗೆ ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…