ಸಾಮಾಜಿಕ ಜಾಲತಾಣದ ನೆರವಿನಿಂದ 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆ ಕುಟುಂಬಕ್ಕೆ ಸೇರ್ಪಡೆ

December 27, 2024
11:22 AM

ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….

ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್‌ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror