ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ ಸೇರ್ಪಡೆಯಾದ ಘಟನೆ ವರದಿಯಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.…..ಮುಂದೆ ಓದಿ….
ಅವರು ಬೆಂಗಳೂರಿನಲ್ಲಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಹೊಸಪೇಟೆಯ ದಣನಾಯಕನ ಕೆರೆಯ 50 ವರ್ಷದ ಸಾಕಮ್ಮ 32 ವರ್ಷಗಳ ಹಿಂದೆ ಕುಟುಂಬ ತೊರೆದು ಕಾಣೆಯಾಗಿದ್ದರು. ನಂತರ 2 ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ ಕುಟುಂಬವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದರು. ಈ ವಿಚಾರವನ್ನು ಕರ್ನಾಟಕದ ಮೂಲದವರಾದ ಉತ್ತರಾಖಂಡ್ ಐಪಿಎಸ್ ಅಧಿಕಾರಿ ರವಿನಂದನ್ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯ್‌ಕುಮಾರ್ ಎಂಬುವವರು ಇದೇ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಈ ಕಾರ್ಯಾಚರಣೆ ಮಹಿಳೆ ತನ್ನ ಕುಟುಂಬ ಸೇರಿಕೊಳ್ಳಲು ನೆರವಾಯಿತು ಎಂದು ಸಚಿವರು ತಿಳಿಸಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…