ಕಾನೂನು ಸುವ್ಯವಸ್ಥೆ ಕಾಪಾಡಲು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಅಗತ್ಯ | ಶಾಂತಿ ಸಭೆಯಲ್ಲಿ ಪ್ರಸ್ತಾಪವಾದ “ಸಾಮಾಜಿಕ ಜಾಲತಾಣದ ಸಮಸ್ಯೆ” |

ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಅಗತ್ಯವಿದೆ. ಅದರ ಜೊತೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆ ಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Advertisement

ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶನಿವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಹಲವು ನಾಗರೀಕರು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಚಾರಕ್ಕೆ ತಡೆಯೊಡ್ಡಬೇಕು ಹಾಗೂ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಂತಹ ಘಟನೆಗಳು ನಡೆದಾಗ ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಸಭೆಯಲ್ಲಿ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ ಅಲೋಕ್ ಕುಮಾರ್, ದೊರೆತಿರುವ ಸೂಕ್ತ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗುತ್ತದೆ, ಯಾವುದೇ ಕಾರಣಕ್ಕೂ ತರಾತುರಿ ಮಾಡುವುದಿಲ್ಲ ಎಂದು  ಹೇಳಿದರು. ಅಹಿತಕರ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಫೇಸ್ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮದಲ್ಲಿ ಗಾಳಿ ಸುದ್ದಿ, ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಹಾಗೂ ಹೇಳಿಕೆಗಳನ್ನು ದಾಖಲಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯುವಕರು ಭಾವದ್ವೇಗಕ್ಕೆ ಒಳಗಾಗಬಾರದು, ಸುಶಿಕ್ಷಿತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪೇಸ್‍ಬುಕ್, ವಾಟ್ಸಪ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ಸುದ್ದಿಗಳನ್ನು ತಿಳಿಯುವ ಮುನ್ನ ಅದರಲ್ಲಿನ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು, ಮುಖ್ಯವಾಗಿ ಹಿರಿಯರು ತಮ್ಮ ಪರಿಸರ ಹಾಗೂ ಸಮುದಾಯದಲ್ಲಿ ಯುವಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

Advertisement

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುವ ಗಾಳಿ ಸುದ್ದಿ ಅಥವಾ ರೂಮರ್ಸ್‍ಗಳಿಗೆ ಕಿವಿಕೊಡದಂತೆ ಈಗಾಗಲೇ ಸಾರ್ವಜನಿಕರಿಗೆ ಕರೆ ನೀಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವನೆ ಮಾತನಾಡಿ, ಮಳೆ ಹಾಗೂ ಗಾಳಿಗೆ ಸಿಸಿಟಿವಿಗಳು ಹಾಳಾಗಿರುವುದರಿಂದ ದುರಸ್ತಿಪಡಿಸಲಾಗುತ್ತಿದೆ, ಕೊಲೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳ ರೀತಿ ತನಿಖೆ ತೀವ್ರವಾಗಿ ನಡೆಯುತ್ತಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ಕಾನೂನು ಸುವ್ಯವಸ್ಥೆ ಕಾಪಾಡಲು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಅಗತ್ಯ | ಶಾಂತಿ ಸಭೆಯಲ್ಲಿ ಪ್ರಸ್ತಾಪವಾದ “ಸಾಮಾಜಿಕ ಜಾಲತಾಣದ ಸಮಸ್ಯೆ” |"

Leave a comment

Your email address will not be published.


*