ಕಾನೂನು ಸುವ್ಯವಸ್ಥೆ ಕಾಪಾಡಲು ಇಂದು ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಅಗತ್ಯವಿದೆ. ಅದರ ಜೊತೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆ ಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶನಿವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಹಲವು ನಾಗರೀಕರು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಚಾರಕ್ಕೆ ತಡೆಯೊಡ್ಡಬೇಕು ಹಾಗೂ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಂತಹ ಘಟನೆಗಳು ನಡೆದಾಗ ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಕೆಲವು ದಿನಪತ್ರಿಕೆಗಳಲ್ಲಿ ನಾಗರೀಕರನ್ನು ಕೆರಳಿಸುವಂತೆ ಬಿತ್ತರಿಸುವ ಸುದ್ದಿಗಳಿಗೆ ತಡೆಒಡ್ಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾತನಾಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎ.ಡಿ.ಜಿ.ಪಿ ಅಲೋಕ್ ಕುಮಾರ್, ದೊರೆತಿರುವ ಸೂಕ್ತ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗುತ್ತದೆ, ಯಾವುದೇ ಕಾರಣಕ್ಕೂ ತರಾತುರಿ ಮಾಡುವುದಿಲ್ಲ ಎಂದು ಹೇಳಿದರು. ಅಹಿತಕರ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಫೇಸ್ಬುಕ್, ಟ್ವಿಟ್ಟರ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮದಲ್ಲಿ ಗಾಳಿ ಸುದ್ದಿ, ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಹಾಗೂ ಹೇಳಿಕೆಗಳನ್ನು ದಾಖಲಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯುವಕರು ಭಾವದ್ವೇಗಕ್ಕೆ ಒಳಗಾಗಬಾರದು, ಸುಶಿಕ್ಷಿತರ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪೇಸ್‍ಬುಕ್, ವಾಟ್ಸಪ್ ಸೇರಿದಂತೆ ಇತರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ಸುದ್ದಿಗಳನ್ನು ತಿಳಿಯುವ ಮುನ್ನ ಅದರಲ್ಲಿನ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು, ಮುಖ್ಯವಾಗಿ ಹಿರಿಯರು ತಮ್ಮ ಪರಿಸರ ಹಾಗೂ ಸಮುದಾಯದಲ್ಲಿ ಯುವಕರಿಗೆ ಈ ಬಗ್ಗೆ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುವ ಗಾಳಿ ಸುದ್ದಿ ಅಥವಾ ರೂಮರ್ಸ್‍ಗಳಿಗೆ ಕಿವಿಕೊಡದಂತೆ ಈಗಾಗಲೇ ಸಾರ್ವಜನಿಕರಿಗೆ ಕರೆ ನೀಡಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವನೆ ಮಾತನಾಡಿ, ಮಳೆ ಹಾಗೂ ಗಾಳಿಗೆ ಸಿಸಿಟಿವಿಗಳು ಹಾಳಾಗಿರುವುದರಿಂದ ದುರಸ್ತಿಪಡಿಸಲಾಗುತ್ತಿದೆ, ಕೊಲೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳ ರೀತಿ ತನಿಖೆ ತೀವ್ರವಾಗಿ ನಡೆಯುತ್ತಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಡಿಕೆಯ ಮೇಲೆ ಯಾವುದೇ ಋಣಾತ್ಮಕ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕಾದ ಹಲವು ಅಂಶಗಳು…
ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟ ಪಡುತ್ತಿದ್ದಾರೆ. ಅನೇಕ ಸಮಯಗಳಿಂದ ಇದಕ್ಕೊಂದು ಪರಿಹಾರ…
ಕೃಷಿ ವಿಜ್ಞಾನ ಪದವೀಧರರ ಹೊರತುಪಡಿಸಿ ಸಾಮಾನ್ಯ ಕೃಷಿಕರ ಕೃಷಿ ಮತ್ತು ಕೃಷಿ ಜ್ಞಾನ…
ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.…
ನೀರು ಕಲುಷಿತವಾಗಿರುವ ಬಗ್ಗೆ ಆರೋಪ-ಪ್ರತ್ಯಾರೋಪ ಇರುವ ಬಗ್ಗೆ ಚುನಾವಣೆ ವಿಷಯವಾಗಿರುವಾಗ, ಮಾಧ್ಯಮಗಳಲ್ಲಿ ಸುದ್ದಿಯಾಗುವ…
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ,…